ಕಾಬೂಲ್‌ನಲ್ಲಿ ಭಾರೀ ಸ್ಫೋಟಗಳು, ಯುದ್ಧದ ವಾತಾವರಣ ಸೃಷ್ಟಿ
ನ್ಯೂಯಾರ್ಕ್ : ಪೆಂಟಗನ್ ಹಾಗೂ ವಾಷಿಂಗ್ಟನ್‌ನಲ್ಲಿ ಪರಿಹಾರ ಕಾರ್ಯಗಳು ತ್ವರಿತ ಗತಿಯಲ್ಲಿ ನಡೆಯುತ್ತಿರುವ ಬೆನ್ನಿಗೇ ಬುಧವಾರ ಬೆಳ್ಳಂಬೆಳಗ್ಗೆ ಆಪ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಕೆಲವು ಸ್ಫೋಟಗಳು ಸಂಭವಿಸಿವೆ. ಆದರೆ, ಈ ದಾಳಿಗಳಿಗೆ ಅಧ್ಯಕ್ಷ ಬುಷ್ ಆದೇಶ ನೀಡಿದ್ದಾರೆ ಎನ್ನುವ ವರದಿಗಳನ್ನು ಅಮೆರಿಕ ತಳ್ಳಿಹಾಕಿದೆ.
ಕಾಬೂಲ್‌ನಲ್ಲಿ ಭಾರೀ ಪ್ರಮಾಣದ ಏಳು ಅಥವಾ ಎಂಟು ಸ್ಫೋಟಗಳು ಬುಧವಾರ ಬೆಳಗ್ಗೆ ಸಂಭವಿಸಿದ್ದು , ಈ ಹಿನ್ನೆಲೆಯಲ್ಲಿ ಕಾಬೂಲ್ ವಿಮಾನ ನಿಲ್ದಾಣದಿಂದ ವಿಮಾನಗಳು ಹೊರ ಹೋಗದಂತೆ ಕಾಬೂಲ್ ಆಡಳಿತ ಸೂಚಿಸಿದೆ. ಕಾಬೂಲ್‌ನಲ್ಲಿ ಯುದ್ಧದ ವಾತಾವರಣ ಮೂಡಿದ್ದು , ಬೆಂಕಿಯ ಜ್ವಾಲೆಗಳು ಗೋಚರಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.
ಅಮೆರಿಕದ ವಿವಿಧೆಡೆಗಳಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಅಂತರರಾಷ್ಟ್ರೀಯ ಭಯೋತ್ಪಾದಕ ಒಸಾಮ ಬಿನ್ ಲ್ಯಾಡೆನ್ ಕೈವಾಡವಿರುವ ಬಗೆಗೆ ತಮಗೆ ಮಾಹಿತಿಯಿರುವುದಾಗಿ ಯುಎಸ್ ಸೆನೆಟರ್ ಒ್ರರಿನ್ ಹ್ಯಾಚ್ ಮಂಗಳವಾರ ರಾತ್ರಿ ತಿಳಿಸಿದ್ದರು. ಹೆಸರು ಹೇಳಬಯಸದ ಅಮೆರಿಕ ಅಧಿಕಾರಿಯಾಬ್ಬರು ದಾಳಿಯ ಬಗೆಗೆ ಬಿನ್ ಲ್ಯಾಡೆನ್‌ನನ್ನು ದೂಷಿಸಿದ್ದು , ತಾಲಿಬಾನ್‌ನ ಮಿಲಿಟರಿಯ ಆತಿಥ್ಯದಲ್ಲಿ ಲ್ಯಾಡನ್ ಇರುವುದಾಗಿ ಹೇಳಿದ್ದರು.
1998 ರಲ್ಲಿ ಪೂರ್ವ ಆಫ್ರಿಕಾದಲ್ಲಿನ ಎರಡು ಅಮೆರಿಕ ರಾಯಭಾರ ಕಚೇರಿಗಳ ಮೇಲೆ ನಡೆದ ಬಾಂಬ್ ದಾಳಿಯ ಸೂತ್ರಧಾರ ಕೂಡ ಬಿನ್ ಲ್ಯಾಡೆನ್ ಎಂದು ಭಾವಿಸಲಾಗಿದೆ. ಈ ದುರಂತದಲ್ಲಿ 224 ಮಂದಿ ಪ್ರಾಣ ಕಳೆದುಕೊಂಡಿದ್ದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications