‘ಅಮೆರಿಕ ಮೇಲಿನ ದಾಳಿ ಭಾರತದ ಆರ್ಥಿಕತೆಮೇಲೆ ಪರಿಣಾಮ ಬೀರದು’
ಮುಂಬಯಿ : ಅಮೆರಿಕದ ಮೇಲೆ ನಡೆದಿರುವ ಭಯೋತ್ಪಾದಕರ ಆಕ್ರಮಣದಿಂದ ತತ್ಕ್ಷಣದಲ್ಲಿ ಭಾರತದ ಆರ್ಥಿಕತೆಯ ಮೇಲೆ ಯಾವುದೇ ನೇರ ಹಾಗೂ ಪ್ರತೀಕೂಲ ಪರಿಣಾಮ ಬೀರದು ಎಂದು ಕೇಂದ್ರ ವಿತ್ತ ಸಚಿವ ಯಶವಂತ ಸಿನ್ಹ ಬುಧವಾರ ಇಲ್ಲಿ ತಿಳಿಸಿದ್ದಾರೆ.
ರುಪಾಯಿಯ ಮೌಲ್ಯದ ಮೇಲೂ ಈ ದಾಳಿಯ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಸಿನ್ಹ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಅಮೆರಿಕ ಮೇಲಿನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತದ ಆರ್ಥಿಕತೆ ಹದಗೆಡುತ್ತದೆ ಎಂದು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಅವರು ಹೇಳಿದರು. ನಮ್ಮ ಬಗ್ಗೆ ನಮಗೆ ವಿಶ್ವಾಸ ಇರಬೇಕು. ರುಪಾಯಿಯ ಮೌಲ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಯಾವ ಅಂಶವೂ ಇಲ್ಲಿ ಕಾಣುತ್ತಿಲ್ಲ ಎಂದು ಅವರು ಧೈರ್ಯ ಹೇಳಿದರು.
ತೈಲ ಬೆಲೆ ಏರಿಕೆ ಆಗುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತವು ತೈಲ ಖರೀದಿಗೆ ಸಂಬಂಧಿಸಿದಂತೆ ದೀರ್ಘಕಾಲೀನ ಒಪ್ಪಂದ ಮಾಡಿಕೊಂಡಿದ್ದು, ಬೆಲೆ ಏರುತ್ತದೆ ಎಂದು ತಾವು ನಿರೀಕ್ಷಿಸುವುದಿಲ್ಲ ಎಂದರು.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications