ಆಪ್ಘಾನಿಸ್ತಾನದ ಮೇಲೆ ದಾಳಿಗೆ ಪಾಕ್ನಲ್ಲಿ ವಾಯುನೆಲೆಗೆ ಅಮೆರಿಕದ ಯತ್ನ
ವಾಷಿಂಗ್ಟನ್ : ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡದ ಮೇಲಿನ ದಾಳಿಯ ಪ್ರಮುಖ ಸೂತ್ರಧಾರ ಎಂದು ಭಾವಿಸಲಾಗಿರುವ ಒಸಾಮ ಬಿನ್ ಲ್ಯಾಡೆನ್ ಅಡಗಿಕೊಂಡಿರುವ ಆಪ್ಘಾನಿಸ್ತಾನದ ಮೇಲೆ ದಾಳಿ ನಡೆಸುವ ಇಂಗಿತವನ್ನು ಅಮೆರಿಕ ವ್ಯಕ್ತಪಡಿಸಿದ್ದು , ಇದಕ್ಕಾಗಿ ವಾಯುನೆಲೆಯನ್ನು ಸ್ಥಾಪಿಸಲು ಅನುಮತಿ ನೀಡುವಂತೆ ಪಾಕಿಸ್ತಾನವನ್ನು ಕೇಳಿದೆ.
ಭಯೋತ್ಪಾದಕರ ಶಕ್ತಿಯನ್ನು ಹಾಗೂ ಅವರ ಮೇಲೆ ದಾಳಿ ನಡೆಸಬಹುದಾದ ಸಾಧ್ಯತೆಗಳನ್ನು ನಾವು ಅಂದಾಜು ಮಾಡುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಬುಷ್ ಆಡಳಿತದಲ್ಲಿನ ಪ್ರಭಾವಿ ಅಧಿಕಾರಿ ಪೊವೆಲ್ ತಿಳಿಸಿದ್ದಾರೆ. ಪಾಕ್ನಲ್ಲಿ ವಾಯುನೆಲೆ ಸ್ಥಾಪಿಸುವ ಬಗೆಗೆ ಪಾಕಿಸ್ತಾನದ ಅಧ್ಯಕ್ಷ ಮುಷರ್ರಫ್ ಅವರೊಂದಿಗೆ ಪೊವೆಲ್ ಮಾತುಕತೆ ನಡೆಸಿದ್ದಾರೆ. ಭಯೋತ್ಪಾದಕತೆಯನ್ನು ತಡೆಗಟ್ಟುವಲ್ಲಿ ಸಹಕಾರ ನೀಡುವುದಾಗಿ ಮುಷರ್ರಫ್ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ.
ಆಪ್ಘಾನಿಸ್ತಾನದೊಂದಿಗಿನ ಗಡಿಯನ್ನು ಮುಚ್ಚುವಂತೆ ಹಾಗೂ ಉಗ್ರರ ಗುಂಪುಗಳಿಗೆ ನಿಧಿ ಒದಗಿಸುವುದನ್ನು ನಿಲ್ಲಿಸುವಂತೆ ಕೂಡ ಪಾಕಿಸ್ತಾನವನ್ನು ಅಮೆರಿಕ ಒತ್ತಾಯಿಸಿದೆ. ಈ ನಡುವೆ ಭಯೋತ್ಪಾದಕರ ಬೇರನ್ನು ಹುಡುಕುವಲ್ಲಿ ಅಮೆರಿಕದ ತನಿಖಾ ತಂಡಗಳು ವಿವಿಧ ದೇಶಗಳಲ್ಲಿ ತೀವ್ರ ಹುಡುಕಾಟ ನಡೆಸುತ್ತಿವೆ ಹಾಗೂ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 50 ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿವೆ.
(ಪಿಟಿಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications