ಗಂಗಾವತಿ ತಾಲೂಕಿನಲ್ಲಿ ಮಲೇರಿಯಾಕ್ಕೆ ನಾಲ್ವರ ಬಲಿ
ಬೆಂಗಳೂರು : ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದಲ್ಲಿ ಮಳೆಗಾಲದಲ್ಲಿ ಬಂದೆರಗುವ ಚಳಿರೋಗ ಮಲೇರಿಯಾ ರೋಗಕ್ಕೆ ನಾಲ್ವರು ಬಲಿಯಾಗಿದ್ದಾರೆ. ಈ ಗ್ರಾಮದಲ್ಲಿ ಸುಮಾರು 800 ಮಂದಿ ಮಲೇರಿಯಾದಿಂದ ಬಳಲುತ್ತಿದ್ದಾರೆ.
ಸತ್ತವರನ್ನು ನಟರಾಜ (3), ದೊಡ್ಡ ಬಸಪ್ಪ (12), ಉಡುಚಪ್ಪ (40), ದಾನಮ್ಮ (48) ಎಂದು ಗುರುತಿಸಲಾಗಿದೆ. ಸರಕಾರಿ ವೈದ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ 1000 ಜನರ ರಕ್ತ ಪರೀಕ್ಷೆ ಮಾಡಿದ್ದು, ಈ ಪೈಕಿ 800 ಜನರಲ್ಲಿ ಮಲೇರಿಯಾ ರೋಗವಿದೆ ಎಂದು ಪತ್ತೆ ಹಚ್ಚಿದ್ದಾರೆ.
ವಾಂತಿಭೇದಿ : ಒಂದು ವಾರದ ಅವಧಿಯಲ್ಲಿ ಕೊಂಡ್ಲಹಳ್ಳಿಯಲ್ಲಿ ನೂರಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ನರಳುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಗ್ರಾಮಕ್ಕೆ ನೀರು ಸರಬರಾಜು ಮಾಡುವ ಕೊಳವೆ ಒಡೆದು, ನೀರು ಕಲುಷಿತಗೊಂಡಿರುವುದೇ ಇದಕ್ಕೆ ಕಾರಣ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಜ್ಞಾನಪ್ರಕಾಶ್ ತಿಳಿಸಿದ್ದಾರೆ.
ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕುದಿಸಿದ ನೀರನ್ನೇ ಕುಡಿಯುವಂತೆ ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ. ಒಡೆದಿರುವ ಪೈಪನ್ನು ದುರಸ್ತಿ ಪಡಿಸುವಂತೆ ಗ್ರಾಮಪಂಚಾಯ್ತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications