ಅಮೆರಿಕಕ್ಕೆ ಸಂಪೂರ್ಣ ನೆರವು ನೀಡಲು ಸರ್ವಪಕ್ಷ ಸಭೆ ಸಮ್ಮತಿ
ನವದೆಹಲಿ : ಅಮೆರಿಕಕ್ಕೆ ಸಂಪೂರ್ಣ ನೆರವು ನೀಡುವ ಕೇಂದ್ರದ ಕ್ರಮಕ್ಕೆ ಸರ್ವಪಕ್ಷಗಳ ಸಭೆ ಶನಿವಾರ ಸಂಪೂರ್ಣ ಸಮ್ಮತಿ ನೀಡಿದೆ. ವಾಜಪೇಯಿ ಅವರ ಅಧ್ಯಕ್ಷತೆಯಲ್ಲಿ 2 ಗಂಟೆಗಳಿಗೂ ಹೆಚ್ಚುಕಾಲ ನಡೆದ ಸಭೆಯಲ್ಲಿ ಈ ಸಂಬಂಧ ನಿರ್ಣಯವನ್ನೂ ಕೈಗೊಳ್ಳಲಾಗಿದೆ.
ಅಮೆರಿಕೆಗೆ ನೆರವು ನೀಡುವ ವಿಷಯದಲ್ಲಿ ಸಂಪೂರ್ಣ ಎಚ್ಚರದಿಂದಿರುವಂತೆ ಎಡಪಕ್ಷದ ನಾಯಕರು ಸರಕಾರಕ್ಕೆ ಸಲಹೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಭಯೋತ್ಪಾದನೆಯ ವಿರುದ್ಧ ಸಮರ ಸಾರಿರುವ ಸರಕಾರದ ಈ ನಿರ್ಧಾರದ ಬಗ್ಗೆ ಚರ್ಚಿಸಲು ನನ್ನ ಮನೆಯ ಬಾಗಿಲು ಸದಾ ತೆರೆದಿರುತ್ತದೆ ಎಂದು ಪ್ರತಿಪಕ್ಷ ನಾಯಕರಿಗೆ ವಾಜಪೇಯಿ ತಿಳಿಸಿದ್ದಾರೆ.
ಯಾವುದೇ ಊಹಾಪೋಹಗಳಿಗೆ ಎಡೆಗೊಡಬೇಡಿ. ನಿಮಗೆ ಯಾವುದೇ ಸಂಶಯ ಇದ್ದರೂ ನನ್ನೊಂದಿಗೆ ನೇರವಾಗಿ ಚರ್ಚಿಸಿ. ಅಮೆರಿಕದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಸರಕಾರ ಪ್ರಶ್ನಾರ್ಹವಾದ ಯಾವುದೇ ಕ್ರಮ ಕೈಗೊಂಡರೂ ನೀವು ನೇರವಾಗಿ ನನ್ನನ್ನು ಪ್ರಶ್ನಿಸಿ ಎಂದು ಪ್ರಧಾನಿ ತಿಳಿಸಿದ್ದಾರೆ.
ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಮೋದ್ ಮಹಾಜನ್ ಈ ವಿಷಯ ತಿಳಿಸಿದರು. ಸರಕಾರದ ನಿರ್ಧಾರದ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೊದಲು ತಮ್ಮೊಂದಿಗೆ ನೇರ ಮಾತುಕತೆ ನಡೆಸುವಂತೆ ಪ್ರಧಾನಿ ಮನವಿ ಮಾಡಿದರು ಎಂದು ಮಹಾಜನ್ ಹೇಳಿದರು.
ಅಮೆರಿಕ ವಿಷಯಕ್ಕೆ ಸಂಬಂಧಿಸಿದಂತೆ ತಾವು ಪ್ರತಿಪಕ್ಷದ ಒಬ್ಬೊಬ್ಬ ನಾಯಕರೊಂದಿಗೂ ಚರ್ಚಿಸಲು ಸಿದ್ಧ ಎಂದು ಪ್ರಧಾನಿ ತಿಳಿಸಿದ್ದಾಗಿಯೂ ಮಹಾಜನ್ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications