ಕಾವೇರಿವಿವಾದ:ಕೇಂದ್ರ ಸಂಪುಟಕ್ಕೆ ರಾಜೀನಾಮೆ, ತಮಿಳು ಸಂಸದರಿಗೆ ಕರೆ
ಕರ್ನಾಟಕದಿಂದ ಕಾವೇರಿ ನೀರು ಪಡೆಯುವ ಸಂಬಂಧ ವಾಜಪೇಯಿ ಅವರನ್ನು ಒತ್ತಾಯಿಸಲು ಕೇಂದ್ರ ಸಚಿವ ಸಂಪುಟದಿಂದ ಹೊರಬರುವಂತೆ ತಮಿಳಗ ರಾಜೀವ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವಾಝಪಡಿ ಕೆ. ರಾಮಮೂರ್ತಿ ತಮಿಳು ಸಂಸದರನ್ನು ಒತ್ತಾಯಿಸಿದ್ದಾರೆ.
ಉಭಯ ರಾಜ್ಯಗಳ ಅವಶ್ಯಕತೆಗಳನ್ನು ಪೂರೈಸುವಷ್ಟು ನೀರನ್ನು ಕರ್ನಾಟಕ ಹೊಂದಿದ್ದರೂ ನೀರು ಬಿಡಲು ತಗಾದೆ ಮಾಡುತ್ತಿದೆ. ಆದ ಕಾರಣ, ಕರ್ನಾಟಕ ಸರ್ಕಾರದ ಮೇಲೆ ಕಾವೇರಿ ನೀರು ಬಿಡುವಂತೆ ಒತ್ತಾಯಿಸಲು ಹಾಗೂ ತಮಿಳುನಾಡು ರೈತರ ಹಿತಾಸಕ್ತಿ ರಕ್ಷಿಸಲು ತಮಿಳು ಸಂಸದರು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಬೇಕು ಎಂದು ರಾಮಮೂರ್ತಿ ಆಗ್ರಹಿಸಿದರು. ಭಾನುವಾರ ಪಕ್ಷದ ಕಾರ್ಯಕಾರಿ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಸುಪ್ರಿಂಕೋರ್ಟ್ ತೀರ್ಮಾನವೊಂದೇ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಶಾಶ್ವತ ಪರಿಹಾರವನ್ನು ಕಲ್ಪಿಸಬಲ್ಲುದು. ಈ ಮುನ್ನ ಕೂಡ ತನ್ನ ಪಾಲಿನ ನೀರನ್ನು ಪಡೆಯಲು ತಮಿಳುನಾಡಿನ ಸಚಿವರು ಸಂಪುಟದಿಂದ ಹೊರಬಂದಿರುವ ಉದಾಹರಣೆಗಳಿವೆ ಎಂದು ರಾಮಮೂರ್ತಿ ಹೇಳಿದರು. ಇದೇ ಕಾರಣಕ್ಕಾಗಿ 1992 ರಲ್ಲಿ ಸ್ವತಃ ರಾಮಮೂರ್ತಿ ಅವರೇ ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications