‘ವೀರಶೈವರು ಮನಸ್ಸು ಮಾಡಿದಲ್ಲಿ ರಾತ್ರೋರಾತ್ರಿ ಸರ್ಕಾರದ ಪತನ’
ಗುಲ್ಬರ್ಗಾ : ವೀರಶೈವ ಲಿಂಗಾಯತ ಮಠಾಧೀಶರು ಮನಸ್ಸು ಮಾಡಿದಲ್ಲಿ ರಾತೋ ರಾತ್ರಿ ಸರಕಾರವನ್ನು ಉರುಳಿಸಬಲ್ಲರು ಎಂದು ಸುಲಫಲ ಮಠದ ಬಸವ ಕೇಂದ್ರದ ಮಹಾಂತೇಶ ಶಿವಾಚಾರ್ಯ ಸ್ವಾಮೀಜಿ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರಕಾರ ವೀರಶೈವರನ್ನು ಮೂಲೆಗುಂಪು ಮಾಡುತ್ತಿದೆ. ಪ್ರತಿ ಕ್ಷೇತ್ರದಲ್ಲೂ ಸಮಾಜವನ್ನು ತುಳಿಯಲು ಪ್ರಯತ್ನಿಸುವ ಸರಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಸರಕಾರಕ್ಕೆ ಕಿವಿ ಮಾತು ಹೇಳಿದರು.
ಸರಕಾರಿ ನೌಕರರ ಮೇಲಾಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ವೀರಶೈವ(ಲಿಂಗಾಯತ) ಸರಕಾರಿ- ಅರೆ ಸರಕಾರಿ ನೌಕರರ ಕಲ್ಯಾಣ ಸಂಘ, ಜಿಲ್ಲಾ ವೀರಶೈವ ಯುವ ವೇದಿಕೆ, ಬಸವ ದಳ, ಅಹಿಂಸಾ ವೇದಿಕೆ ಹಾಗೂ ನಾಕರಿಕ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ನಂತರದ ಸಭೆಯಲ್ಲಿ ಸ್ವಾಮೀಜಿ ಮಾತನಾಡುತ್ತಿದ್ದರು.
ಸಮಾಜಕ್ಕೆ ಅನ್ಯಾಯವಾದಾಗ ಮಠಾಧೀಶರು ಜನರ ಬೆಂಬಲಕ್ಕೆ ನಿಲ್ಲುತ್ತಾರೆ ಎಂದ ಸ್ವಾಮೀಜಿ ವೀರಶೈವ ನೌಕರರ ಮೇಲೆ ಆಗಿರುವ ಅನ್ಯಾಯವನ್ನು ಸರಕಾರ ಸರಿಪಡಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಸರಕಾರವನ್ನು ದಬಾಯಿಸಿದರು.
ಆಳಂದದ ಸಿದ್ಧ ಲಿಂಗ ಶ್ರೀಗಳು, ಗುರುಬೃಹನ್ಮಠದ ಶ್ರೀಗಳು, ನೌಕರರ ಸಂಘದ ಕಾರ್ಯದರ್ಶಿ ರವೀಂದ್ರ ಶಾಬಾದಿ ಕಾರ್ಯಕ್ರಮದಲ್ಲಿ ಮಾತನಾಡಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications