ಹುಬ್ಬಳ್ಳಿಯಲ್ಲಿ ಹಠಾತ್ ಹಿಂಸಾಚಾರ, ಗೋಲಿಬಾರ್‌ಗೆ ಒಬ್ಬ ಬಲಿ
ಹುಬ್ಬಳ್ಳಿ : ಶನಿವಾರ ಸಂಜೆ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ನಗರದಲ್ಲಿ ಹಠಾತ್ತನೆ ಸಂಭವಿಸಿದ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಗೋಲಿಬಾರ್ ನಡೆಸಿದಾಗ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಪರಿಸ್ಥಿತಿ ನಿಯಂತ್ರಣಕ್ಕೆ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ವಿಶ್ವಹಿಂದೂ ಪರಿಷತ್ತಿನ ಅಂತರ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಶೋಕ ಸಿಂಘಾಲ್ ಅವರ ಅಮೃತ ಮಹೋತ್ಸವ ಹಾಗೂ ಶೋಭಾ ಯಾತ್ರೆಯ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆ ಪ್ರಯುಕ್ತ ನಡೆದ ಶೋಭಾಯಾತ್ರೆ ನಗರದ ಗಾಜಿನ ಮನೆಯಿಂದ ಹೊರಟು ಪ್ರಮುಖ ರಸ್ತೆಗಳ ಮೂಲಕ ತೆರಳಿ ಗಣೇಶ ಪೇಟೆ ಬಳಿ ಬಂದಾಗ ಕೆಲವು ಕಿಡಿಗೇಡಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಿದಾಗ ಪರಿಸ್ಥಿತಿ ಕೈಮೀರಿತ್ತು.
ಗಲಭೆಯಲ್ಲಿ ಒಂದು ಜೀಪ್ , ಎರಡು ಕಾರ್ ಸಂಪೂರ್ಣ ಜಖಂ ಗೊಂಡಿವೆ. ಮೂರು ಆಟೋಗಳಿಗೆ ಬೆಂಕಿ ಹಚ್ಚಲಾಗಿದೆ. ಓರ್ವ ಪತ್ರಿಕಾ ಛಾಯಾಗ್ರಾಹಕನನ್ನು ಮನ ಬಂದಂತೆ ಥಳಿಸಿ ಹಣ ಅಪಹರಿಸಲಾಗಿದೆ. ಕೊಪ್ಪೀಕರ್ ರಸ್ತೆಯಲ್ಲಿ ಓರ್ವ ವ್ಯಕ್ತಿ ಪೊಲೀಸ್ ಗುಂಡಿಗೆ ಬಲಿಯಾಗಿದ್ದಾನೆ.
ಕಾರ್ಯಕ್ರಮದಲ್ಲಿ ಅಶೋಕ್ ಸಿಂಘಾಲ್ ಅವರನ್ನು ಸನ್ಮಾನಿಸಲಾಯಿತು. ಆಚಾರ್ಯ ಧಮೇಂದ್ರಜಿ, ಮೂರು ಸಾವಿರ ಮಠದ ಜಗದ್ಗುರು ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ, ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಸಿಂಘಾಲ್ ಅವರಿಗೆ ಅಭಿನಂದನೆ ಹೇಳಿದರು. ಸಂಸದ ವಿಜಯ ಸಂಕೇಶ್ವರ ಭಾಗವಹಿಸಿದ್ದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಘಾಲ್ ಅವರು ಜಿಹಾದ್ ಪಾಠ ಹೇಳಿಕೊಡುವ ಮದ್ರಸಾಗಳನ್ನು ಸರಕಾರ ನಿಯಂತ್ರಿಸಬೇಕು ಎಂದು ಪ್ರತಿಪಾದಿಸಿದರು. ಅಮೆರಿಕಾಕ್ಕೆ ಬೆಂಬಲಿಸುವ ಮಾತನ್ನು ಸಮರ್ಥಿಸಿದ ಅವರು ಹಿಂದೂಗಳ ಶಾಂತಿಪ್ರಿಯ ಸ್ವಭಾವವನ್ನು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಅಳವಡಿಸಿಕೊಳ್ಳಬೇಕು ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications