ಹುಬ್ಬಳ್ಳಿಯಲ್ಲಿ ಇನ್ನೊಂದು ಸಾವು, ಬೀದಿಗಳ ತುಂಬ ಪೊಲೀಸರು
ಹುಬ್ಬಳ್ಳಿ: ವಿಶ್ವಹಿಂದೂಪರಿಷತ್ತಿನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಶೋಕ್ ಸಿಂಘಾಲ್ ಅವರ ಸನ್ಮಾನ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ ಉಂಟಾದ ಗಲಭೆಯಿಂದ ಉದ್ರಿಕ್ತಗೊಂಡಿರುವ ಹುಬ್ಬಳ್ಳಿಯಲ್ಲಿ ಭಾನುವಾರವೂ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಈ ನಡುವೆ ಗಾಯಗೊಂಡಿದ್ದ ಇನ್ನೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾನೆ. ಇದರಿಂದಾಗಿ ಗಲಭೆಯಲ್ಲಿ ಜೀವ ಕಳಕೊಂಡವರ ಸಂಖ್ಯೆ ಎರಡಕ್ಕೇರಿದೆ.
ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ನಗರ ಸಾರಿಗೆಯನ್ನು ರದ್ದುಗೊಳಿಸಲಾಗಿದೆ. ನಗರದಲ್ಲೆಲ್ಲೂ ಜನಸಂಚಾರ ಕಂಡುಬರುತ್ತಿಲ್ಲ. ರಸ್ತೆಗಳು ನಿರ್ಜನವಾಗಿದ್ದು, ನಗರದ ಮುಖ್ಯ ರಸ್ತೆಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಸಿನೆಮಾ ಮಂದಿರಗಳನ್ನು ಮುಚ್ಚಲಾಗಿದೆ.
ಹುಬ್ಬಳ್ಳಿಯಲ್ಲಿ ಪೊಲೀಸರ ಠಿಕಾಣಿ
ರಾಜ್ಯ ಪೊಲೀಸ್ ಮಹಾ ನಿರ್ದೇಶಕ ವಿ.ವಿ.ಭಾಸ್ಕರ್ ಸೇರಿದಂತೆ ಉನ್ನತ ಅಧಿಕಾರಿಗಳ ತಂಡ ಹುಬ್ಬಳ್ಳಿಯಲ್ಲಿ ಠಿಕಾಣಿ ಹೂಡಿದೆ. ಪರಿಸ್ಥಿತಿ ಮತ್ತೆ ಕದಡದಂತೆ ಪೂರ್ವ ಎಚ್ಚರಿಕೆಯಿಂದ ಇತರ ಜಿಲ್ಲೆಗಳಿಂದ ಪೊಲೀಸ್ ತುಕಡಿಯನ್ನು ಕರೆಸಿಕೊಳ್ಳಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ತಂಡ ಪರಿಸ್ಥಿತಿಯ ಅಧ್ಯಯನ ನಡೆಸುತ್ತಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಹಿಂಡಸಗೇರಿ
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಎ. ಎಂ. ಹಿಂಡಸಗೇರಿಯವರು ನಗರದಲ್ಲಿ ಮತ್ತೆ ಶಾಂತಿಯನ್ನು ಸ್ಥಾಪಿಸಲು ನಾಗರಿಕರು ಸಹಕರಿಸುವಂತೆ ಕರೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications