ಪಾಕ್ನಲ್ಲಿನ ಪಾಶ್ಚಿಮಾತ್ಯ ರಾಜತಾಂತ್ರಿಕರು ಭಾರತಕ್ಕೆಬರಲು ತುದಿಗಾಲಲ್ಲಿ
ಇಸ್ಲಮಾಬಾದ್ : ಇಲ್ಲಿರುವ ಪಾಶ್ಚಿಮಾತ್ಯ ರಾಷ್ಟ್ರಗಳ ರಾಜತಾಂತ್ರಿಕರು, ಆಪ್ಘಾನಿಸ್ತಾನದ ಮೇಲೆ ಅಮೆರಿಕ ದಾಳಿ ನಡೆಸಿದಲ್ಲಿ ಉಂಟಾಗಬಹುದಾದ ಸಂಭವನೀಯ ತುರ್ತು ಪರಿಸ್ಥಿತಿ ನಿರೀಕ್ಷೆಯಲ್ಲಿ ಭಾರತದಲ್ಲಿ ಆಶ್ರಯ ಪಡೆಯಲು ಮುಂದಾಗಿದ್ದು , ವೀಸಾ ಪಡೆಯಲು ಭಾರತದ ರಾಯಭಾರ ಕಚೇರಿಯನ್ನು ಎಡತಾಕುತ್ತಿದ್ದಾರೆ.
ಅಮೆರಿಕ, ಬ್ರಿಟನ್ ಸೇರಿದಂತೆ ಬಹುತೇಕ ಪಶ್ಚಿಮ ರಾಷ್ಟ್ರಗಳು ಕೆಲವು ದಿನಗಳಿಂದ ಭಾರತದ ರಾಯಭಾರಿ ಕಚೇರಿಯನ್ನು ವೀಸಾ ಪಡೆಯಲು ಸಂಪರ್ಕಿಸಿವೆ. ಸ್ವೀಡನ್, ಬೆಲ್ಜಿಯಂ, ನಾರ್ವೆ ಮುಂತಾದ ದೇಶಗಳ ರಾಜತಾಂತ್ರಿಕ ಸಿಬ್ಬಂದಿ ಈಗಾಗಲೇ ಭಾರತೀಯ ವೀಸಾಗಳನ್ನು ಪಡೆದಿದ್ದಾರೆ.
ತಾಲಿಬಾನ್ ಹಾಗೂ ಒಸಾಮ ಬಿನ್ ಲ್ಯಾಡೆನ್ಗೆ ಪಾಕಿಸ್ತಾನದಲ್ಲಿ ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಇರುವುದು, ಪಶ್ಚಿಮದ ರಾಜತಾಂತ್ರಿಕರು ಇಸ್ಲಮಾಬಾದ್ ತೊರೆಯಲು ಪ್ರಮುಖ ಕಾರಣವಾಗಿದೆ. ಈ ನಡುವೆ, ವಾಘಾ ಗಡಿ ಮೂಲಕ ಭಾರತವನ್ನು ಪ್ರವೇಶಿಸಲು ಅನುಮತಿ ನೀಡುವಂತೆ ಅನೇಕ ರಾಜತಾಂತ್ರಿಕರು ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಪಾಕ್ ಸರ್ಕಾರದ ಪ್ರತಿಕ್ರಿಯೆ ಇನ್ನೂ ವ್ಯಕ್ತವಾಗಿಲ್ಲ .
ಆಪ್ಘಾನಿಸ್ತಾನದ ಗಡಿ ಭಾಗಗಳಲ್ಲಿರುವ ಉತ್ತರದ ಪ್ರದೇಶಗಳು, ಬಲೂಚಿಸ್ತಾನ ಮುಂತಾದ ಪ್ರದೇಶಗಳಿಂದ ತನ್ನ ನಾಗರಿಕರು ವಾಪಸ್ಸಾಗುವಂತೆ ಬ್ರಿಟನ್ ಕರೆ ನೀಡಿದೆ.
(ಪಿಟಿಐ)
Post Your Views
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications