ಕಾಶ್ಮೀರ ವಿಷಯದಲ್ಲಿ ಸಕ್ರಿಯ ಪಾತ್ರ: ಅಮೆರಿಕಕ್ಕೆ ಪಾಕ್ ಷರತ್ತು
ವಾಷಿಂಗ್ಟನ್ : ಒಸಮಾ ಬಿನ್ ಲಾಡೆನ್ ವಿರುದ್ಧ ಸಮರ ಸಾರಿರುವ ಅಮೆರಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿರುವ ಪಾಕಿಸ್ತಾನ, ಅದಕ್ಕೆ ಪ್ರತಿಫಲವಾಗಿ ಕಾಶ್ಮೀರ ವಿಷಯದಲ್ಲಿ ಅಮೆರಿಕ ಸಕ್ರಿಯ ಪಾತ್ರ ವಹಿಸಬೇಕು ಎಂಬ ಇಂಗಿತ ವ್ಯಕ್ತಪಡಿಸಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ.
ಆಫ್ಘಾನಿಸ್ತಾನದ ವಿರುದ್ಧದ ಅಮೆರಿಕದ ಹೋರಾಟಕ್ಕೆ ವಾಯುನೆಲೆ ನೀಡುವುದೂ ಸೇರಿದಂತೆ, ತಾನು ನೀಡುತ್ತಿರುವ ಎಲ್ಲ ಸಹಕಾರಕ್ಕೆ ಪ್ರತಿಫಲವಾಗಿ ಅಮೆರಿಕವು ಪಾಕ್ ಮೇಲೆ ಹೇರಿರುವ ದಿಗ್ಭಂಧನ ತೆರವುಗೊಳಿಸಬೇಕು ಮತ್ತು ಕಾಶ್ಮೀರ ವಿಷಯದಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎಂದು ಪಾಕಿಸ್ತಾನದ ಅಧ್ಯಕ್ಷ ಮುಷರ್ರಫ್ ಅವರು ಅಮೆರಿಕ ಅಧ್ಯಕ್ಷ ಬುಷ್‌ರಿಗೆ ತಾಕೀತು ಮಾಡಿದ್ದಾರೆ.
ಅಮೆರಿಕದ ಅಧ್ಯಕ್ಷ ಬುಷ್‌ರೊಂದಿಗೆ ನಡೆದ 15 ನಿಮಿಷಗಳ ಮಾತುಕತೆಯ ಸಂದರ್ಭದಲ್ಲಿ ಈ ಬಗ್ಗೆ ಪ್ರಸ್ತಾಪವಾಗಿದೆ ಎನ್ನಲಾಗಿದೆ. ಅಮೆರಿಕ ಅಧ್ಯಕ್ಷ ಬುಷ್ ಅವರು ವಾಷಿಂಗ್ಟನ್‌ನಲ್ಲಿ ನೀಡಿರುವ ಹೇಳಿಕೆಯಲ್ಲಿ ಭಯೋತ್ಪಾದನೆಯ ವಿರುದ್ಧದ ತಮ್ಮ ಹೋರಾಟಕ್ಕೆ ಪಾಕಿಸ್ತಾನ ಮತ್ತು ಭಾರತದಿಂದ ಸಕಾರಾತ್ಮಕ ಬೆಂಬಲ ದೊರೆತಿದೆ ಎಂದು ತಿಳಿಸಿದ್ದಾರೆ.
ಬೇಷರತ್ ಬೆಂಬಲ ಅಲ್ಲ : ಪಾಕ್ ಅಮೆರಿಕಕ್ಕೆ ನೀಡುತ್ತಿರುವುದು ಬೇಷರತ್ ಬೆಂಬಲ ಅಲ್ಲ ಎಂಬ ಅಂಶಗಳು ಗರಿಬಿಚ್ಚಿಕೊಳ್ಳುತ್ತಿವೆ. ಪಾಕ್ ಕಾಶ್ಮೀರ ವಿಷಯವನ್ನು ಇದರೊಂದಿಗೆ ಥಳಕು ಹಾಕುತ್ತಿದೆ. ಮಿಗಿಲಾಗಿ ಅಮೆರಿಕದ ಉದ್ದೇಶಿತ ಹೋರಾಟದಲ್ಲಿ ಭಾರತ ಮತ್ತು ಇಸ್ರೇಲ್‌ಗಳನ್ನು ಸೇರಿಸಿಕೊಳ್ಳಬಾರದು ಎಂದೂ ಷರತ್ತು ವಿಧಿಸಿದೆ.
ಈ ಸಮರದಲ್ಲಿ ಭಾರತ ಮತ್ತು ಇಸ್ರೇಲ್‌ಗಳನ್ನು ಸೇರಿಸಿಕೊಳ್ಳಬಾರದು ಎಂಬ ಪಾಕ್ ಷರತ್ತಿನ ಬಗ್ಗೆ ಅಮೆರಿಕ ಪರಿಶೀಲಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಕಾಲಿನ್ ಪೋವೆಲ್ ತಿಳಿಸಿದ್ದಾರೆ. ಈ ನಡುವೆ ಅಮೆರಿಕಕ್ಕೆ ಬೆಂಬಲ ನೀಡುವ ಮುಷರ್ರಫ್ ಕ್ರಮವನ್ನು ಸೌದಿಯ ಯುವರಾಜ ಅಬ್ದುಲ್ಲಾ ಬಿನ್ ಅಬ್ದುಲ್ಲಾ ಅಜೀಜ್ ಅಭಿನಂದಿಸಿದ್ದಾರೆ ಎಂದು ಇಸ್ಲಾಮಾಬಾದ್ ವರದಿಗಳು ಹೇಳಿವೆ.(ಪಿ.ಟಿ.ಐ./ಇನ್‌ಫೋ ವಾರ್ತೆ)
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications