ಲಾಡೆನ್ನನ್ನು ಅಮೆರಿಕೆಗೆ ಒಪ್ಪಿಸಲು ತಾಲಿಬಾನ್ಗೆ ಪಾಕ್ ಗಡುವು
ಇಸ್ಲಾಮಾಬಾದ್ : ಕರಾಳ ಮಂಗಳವಾರ ಅಮೆರಿಕೆಯಲ್ಲಿ ನಡೆದ ವಾಯುದಾಳಿಗೆ ಕಾರಣ ಎಂದು ಶಂಕಿಸಲಾಗಿರುವ ಅಂತಾರಾಷ್ಟ್ರೀಯ ಉಗ್ರಗಾಮಿ ಒಸಮಾ ಬಿನ್ ಲಾಡೆನ್ನನ್ನು ಅಮೆರಿಕೆಗೆ ಒಪ್ಪಿಸಿ, ಸಂಭವನೀಯ ಯುದ್ಧ ತಡೆಯುವಂತೆ ಪಾಕಿಸ್ತಾನ ತಾಲಿಬಾನ್ಗೆ ಅರಿಕೆ ಮಾಡಿಕೊಂಡಿದೆ.
ಈ ಸಂಬಂಧ ಮಾತುಕತೆ ನಡೆಸಲು ಪಾಕ್ ರಾಜತಾಂತ್ರಿಕ ನಿಯೋಗ ಕಾಬೂಲ್ಗೆ ತೆರಳುತ್ತಿದೆ. ಲಾಡೆನ್ನನ್ನು ಒಪ್ಪಿಸಲು ಪಾಕ್ ಮೂರು ದಿನಗಳ ಗಡುವು ನೀಡಿದ್ದು, ಈ ಮನವಿ ತಿರಸ್ಕರಿಸಿದರೆ, ಅಮೆರಿಕದಿಂದ ಯುದ್ಧ ಎದುರಿಸಬೇಕಾದೀತು ಎಂದು ಎಚ್ಚರಿಕೆಯನ್ನು ನೀಡಿದೆ ಎಂದು ಸಿಎನ್ಎನ್ ವರದಿ ಮಾಡಿದೆ.
ಆಫ್ಘಾನಿಸ್ತಾನದ ಮೇಲೆ ನಡೆಯಬಹುದಾದ ಭಾರಿ ಯುದ್ಧವನ್ನು ತಡೆಯಲು ನಾವು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಲಾಡೆನ್ನನ್ನು ಒಪ್ಪಿಸುವಂತೆ ತಾಲಿಬಾನ್ಗೆ ಗಡುವು ನೀಡಲಾಗುತ್ತಿದೆ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿಗಳು ತಿಳಿಸಿದ್ದಾಗಿ ಎಎಫ್ಪಿ ವರದಿ ತಿಳಿಸಿದೆ.
ಚೀನಾಕ್ಕೆ ಮುಷರ್ರಫ್ : ಈ ಮಧ್ಯೆ ಅಮೆರಿಕ ಮೇಲಿನ ದಾಳಿಯ ನಂತರದ ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಲು ಪಾಕ್ ಮಿಲಿಟರಿ ಆಡಳಿತಗಾರ ಹಾಗೂ ಅಧ್ಯಕ್ಷ ಮುಷರ್ರಫ್ ಒಂದೆರಡು ದಿನದಲ್ಲೇ ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ. ಚೀನೀ ನಾಯಕರ ಜತೆ ಮುಷರ್ರಫ್ ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ಚೀನದ ರಾಯಭಾರಿ ಲು ಷಿನ್ ಲಿನ್ ಅವರ ಜೊತೆ ಮುಷರ್ರಫ್ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಮುಷರ್ರಫ್ ಮುಂದಿನ ವಾರದಲ್ಲಿ ಸೌದಿಗೆ ಭೇಟಿ ನೀಡಿ ನಾಯಕರ ಜೊತೆ ಮಾತುಕತೆ ನಡೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ. (ಪಿ.ಟಿ.ಐ)
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications