ಕಾಸರಗೋಡಿನಲ್ಲಿ ತಜ್ಞರಿಂದ ಎಂಡೋಸಲ್ಫಾನ್ ಪರಿಣಾಮ ಅಧ್ಯಯನ
ಕಾಸರಗೋಡು : ಎಂಡೋಸಲ್ಫಾನ್ ಕೀಟನಾಶಕ ಸಿಂಪಡಣೆಯಿಂದ ಜಿಲ್ಲೆಯಾದ್ಯಂತ ತಲೆದೋರಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲು ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ನ ಅಹ್ಮದಾಬಾದ್ ಘಟಕದ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಒಕ್ಯುಪೇಷನ್ ಹೆಲ್ತ್ ತಂಡ ಆಗಮಿಸಲಿದೆ.
ಡಾ. ಎಚ್. ಎನ್. ಸಯ್ಯದ್ ಅವರ ನೇತೃತ್ವದ ತಂಡ ಈ ತಿಂಗಳ ಕೊನೆಗೆ ಅಧ್ಯಯನ ಕಾರ್ಯ ಕೈಗೆತ್ತಿಕೊಳ್ಳಲಿದ್ದು, ಜಿಲ್ಲೆಯಲ್ಲಿ ಮಾತ್ರವಲ್ಲದೆ, ಕರ್ನಾಟಕದ ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡಲಿದೆ.
ಕೊಳೆ ರೋಗ ನಿಯಂತ್ರಣಕ್ಕಾಗಿ ಅಡಿಕೆ ಮರಕ್ಕೆ ಎಂಡೋಸಲ್ಫಾನ್ ಸಿಂಪಡಿಸುವುದರಿಂದ ಪಾರ್ಶ್ವ ಪರಿಣಾಮಗಳು ಉಂಟಾಗಿದ್ದು, ಹಲವು ಮಕ್ಕಳು ಅಂಗವಿಕವರಾದ ಘಟನೆಗಳೂ ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಈ ತಂಡ ಅಧ್ಯಯನ ನಡೆಸಲಿದೆ. ಕೇಂದ್ರ ಮಾನವ ಹಕ್ಕುಗಳ ಆಯೋಗದ ಆದೇಶದ ಮೇಲೆ ಆಗಮಿಸಲಿರುವ ಈ ತಂಡದ ಅಧ್ಯಯನ ಕಾರ್ಯದಲ್ಲಿ ಮಂಗಳೂರು ಮತ್ತು ಕೋರಿkುಕ್ಕೋಡ್ನ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳೂ ಪಾಲ್ಗೊಳ್ಳಲಿದ್ದಾರೆ.
ಎಂಡೋಸಲ್ಫಾನ್ ಕೀಟ ನಾಶಕ ಸಿಂಪಡಣೆಯನ್ನು ನಿಷೇಧಿಸಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಜ್ಞೆ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications