ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ 30 ಕ್ಕೂ ಹೆಚ್ಚು ನಕಲಿ ಆಯಾಗಳು

By Staff
|
Google Oneindia Kannada News

ಬೆಂಗಳೂರು : ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ 30 ಕ್ಕೂ ಹೆಚ್ಚು ನಕಲಿ ಆಯಾಗಳು ಕೆಲಸ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಲೋಕಾಯುಕ್ತ ದ ನ್ಯಾಯಮೂರ್ತಿ ವೆಂಕಟಾಚಲ ಅವರು ಬುಧವಾರ ಬೌರಿಂಗ್‌ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಕಲಿ ಆಯಾಗಳು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ವಿಷಯ ಪತ್ತೆಯಾಯಿತು. ಈ ಆಯಾಗಳಿಗೆ ವೈದ್ಯಕೀಯ ತರಬೇತಿ ಆಗಿದೆಯೇ ಅಥವಾ ಆಯಾ ಕರ್ತವ್ಯದ ಅನುಭವ ಇದೆಯೇ ಎನ್ನುವುದು ತಿಳಿದುಬಂದಿಲ್ಲ .

ಅಸಲಿ ಆಯಾಗಳ ಸ್ಥಾನದಲ್ಲಿ ನಕಲಿ ಆಯಾಗಳು ಕೆಲಸ ಮಾಡುತ್ತಿದ್ದು , ಅಸಲಿ ಆಯಾಗಳು ವಾರಕ್ಕೊಮ್ಮೆ ಹಾಜರಿ ಪುಸ್ತಕಕ್ಕೆ ಸಹಿ ಮಾಡುತ್ತಿದ್ದರು ಎನ್ನಲಾಗಿದೆ. ನಕಲಿ ಆಯಾಗಳ ಸಂಬಂಧ ಸಮಗ್ರ ವರದಿ ನೀಡುವಂತೆ ನ್ಯಾಯಮೂರ್ತಿ ವೆಂಕಟಾಚಲ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X