ಅಮೆರಿಕ ಮೇಲಿನ ದಾಳಿ : ವಿಶ್ವಸಂಸ್ಥೆಯ ಮಹಾಧಿವೇಶನ ಮುಂದಕ್ಕೆ
ವಿಶ್ವಸಂಸ್ಥೆ : ಅಮೆರಿಕದ ಮೇಲೆ ನಡೆದಿರುವ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಈ ತಿಂಗಳ 24 ರಿಂದ ನಡೆಯಬೇಕಿದ್ದ ವಿಶ್ವಸಂಸ್ಥೆಯ ವಾರ್ಷಿಕ ಮಾಹಾಧಿವೇಶವನ್ನು ಮುಂದೂಡಲಾಗಿದೆ. ಈ ವಿಷಯವನ್ನು ಸಾಮಾನ್ಯ ಅಧಿವೇಶನದ ವಕ್ತಾರ ಜಾನ್ ಫಿಷರ್ ಪ್ರಕಟಿಸಿದ್ದಾರೆ.
ಸಭೆಯ ನಡೆಯುವ ಮುಂದಿನ ದಿನಾಂಕವನ್ನು ಅಮೆರಿಕದ ಸರಕಾರದೊಂದಿಗೆ ಸಮಾಲೋಚಿಸಿದ ಬಳಿಕ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ವಿಶ್ವದ 12ಕ್ಕೂ ಹೆಚ್ಚು ನಾಯಕರು ಪಾಲ್ಗೊಳ್ಳಬೇಕಾಗಿದ್ದ ಈ ಅಧಿವೇಶವನ್ನು ಸೋಮವಾರ ಅಮೆರಿಕ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಉದ್ಘಾಟಿಸುವ ಕಾರ್ಯಕ್ರಮ ಇತ್ತು.
ಸೋಮವಾರದಿಂದ ಅಕ್ಟೋಬರ್ 5ನೇ ತಾರೀಖಿನವರೆಗೆ ನಡೆಯಬೇಕಿದ್ದ ಈ ವಾರ್ಷಿಕ ಮಹಾಧಿವೇಶನವನ್ನು ಮುಂದೂಡುವಂತೆ ಅಮೆರಿಕ ಆಡಳಿತ ಕೋರಿರಲಿಲ್ಲವಾದರೂ, ರಾಜ ತಾಂತ್ರಿಕರು ಅಧಿವೇಶನ ನಡೆಸುವಲ್ಲಿ ಇರುವ ತೊಡಕುಗಳನ್ನು ವಿವರಿಸಿದ್ದರು.
ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ಗಳ ಮೇಲೆ ನಡೆದ ಆತ್ಮಹತ್ಯಾದಳದ ವಿಮಾನ ದಾಳಿಯ ಹಿನ್ನೆಲೆಯಲ್ಲಿ ಅಮೆರಿಕದ ಎಲ್ಲ ಆಯಕಟ್ಟಿನ ಸ್ಥಳಗಳಲ್ಲೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
(ಪಿ.ಟಿ.ಐ)
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications