ವಿಪ್ರೋ ಸಾಫ್ಟ್‌ವೇರ್ ಎಂಜಿನಿಯರುಗಳು ಈಗಲೂ ನಾಪತ್ತೆ
ಬೆಂಗಳೂರು : ಉಗ್ರರ ದಾಳಿಗೆ ಸಿಲುಕಿ ಉರುಳಿ ಬಿದ್ದ ನ್ಯೂಯಾರ್ಕಿನ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡದ 97ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾದ ವಿಪ್ರೋ ಸಂಸ್ಥೆಯ ನಾಲ್ವರು ಸಾಫ್ಟ್‌ವೇರ್ ಎಂಜಿನಿಯರ್‌ಗಳ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.
ವಿಪ್ರೋ ಸಹಾಯ ವಿಭಾಗದ ಅಧಿಕಾರಿ ಸಂತೋಷ್ ಕುಮಾರ್ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಶಶಿಕಿರಣ್ ಕಡಬ, ಹೆಮಂತ್ ಪುತ್ತೂರು, ಶ್ರೇಯಸ್ ರಂಗನಾಥ್ ಹಾಗೂ ದೀಪಿಕಾ ರಾವ್ ಅಮೆರಿಕೆಯಲ್ಲಿ ಯೋಜನೆಯಾಂದರ ಕೆಲಸ ಮಾಡುತ್ತಿದ್ದರು. ಅವರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಅವರ ತಂದೆ- ತಾಯಿಯರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದು, ಕಂಪನಿ ನೈತಿಕ ಸ್ಥೈರ್ಯ ತುಂಬುತ್ತಿದೆ ಎಂದು ಸಂತೋಷ್ ಕುಮಾರ್ ಹೇಳಿದರು.
ಕಂಪನಿಯ ಜೊತೆ ಸದಾ ಒಡನಾಟ ಇಟ್ಟುಕೊಂಡಿರುವ ತಂದೆ- ತಾಯಿಯರು ಅದು ನೀಡುತ್ತಿರುವ ಮಾಹಿತಿಯನ್ನೇ ನೆಚ್ಚುತ್ತಿದೆ. ಕಂಪನಿ ತಮ್ಮ ಮಕ್ಕಳನ್ನು ಹುಡುಕಲು ಕೈಮೀರಿ ಪ್ರಯತ್ನಿಸುತ್ತಿದೆ. ಇದರ ನಡುವೆ ಮಾಧ್ಯಮದವರು ಇಲ್ಲ ಸಲ್ಲದ್ದನ್ನು ಬರೆದು, ಪುಕಾರೆಬ್ಬಿಸುತ್ತಿರುವುದು ಸರಿಯಲ್ಲ ಎಂಬುದು ಪೋಷಕರೊಬ್ಬರ ಅಭಿಪ್ರಾಯ. ಆಂಗ್ಲ ಪತ್ರಿಕೆಯಾಂದು ಬುಧವಾರದ ಸಂಚಿಕೆಯಲ್ಲಿ ಶ್ರೇಯಸ್ ರಂಗನಾಥ್ ಸಂಭವನೀಯ ಮೃತರ ಪಟ್ಟಿಯಲ್ಲಿರುವುದಾಗಿ ಪ್ರಕಟಿಸಿತ್ತು.
ಮಾಧ್ಯಮಗಳು ಪ್ರಮಾಣೀಕರಿಸಿ ನೋಡದೆ, ಅರೆಬರೆ ಅಥವಾ ತಪ್ಪು ಮಾಹಿತಿ ಕೊಟ್ಟಲ್ಲಿ ಮೊದಲೇ ಆಗಿರುವ ಗಾಯದ ಮೇಲೆ ಉಪ್ಪು ಸುರಿದಂತೆ. ಇದು ಸಲ್ಲ ಎಂದು ಕಳೆದುಹೋಗಿರುವ ಸಾಫ್ಟ್‌ವೇರ್ ಎಂಜಿನಿಯರೊಬ್ಬರ ತಂದೆ ಅಲವತ್ತುಕೊಂಡರು.
(ಪಿಟಿಐ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications