ಭಯೋತ್ಪಾದನೆ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆ ಸಾಮಾನ್ಯ ಸಭೆ
ನ್ಯೂಯಾರ್ಕ್ : ಅಂತರರಾಷ್ಟ್ರೀಯ ಭಯೋತ್ಪಾದನೆ ಬಗ್ಗೆ ಚರ್ಚಿಸಲು 189 ಸದಸ್ಯ ರಾಷ್ಟ್ರಗಳ ಸಾಮಾನ್ಯ ಸಭೆಯನ್ನು ಅಕ್ಟೋಬರ್ 1ರಂದು ನಡೆಸಲು ವಿಶ್ವಸಂಸ್ಥೆ ನಿರ್ಧರಿಸಿದೆ.
ಭಯೋತ್ಪಾದನೆ ನಿರ್ಮೂಲನೆಗೆ ಸಂಬಂಧಿಸಿ ಈ ಸಾಮಾನ್ಯ ಸಭೆಯಲ್ಲಿ ವಿಶ್ವ ಸಂಸ್ಥೆಯ ಸದಸ್ಯ ರಾಷ್ಟ್ರಗಳು ಹೊಸ ಒಪ್ಪಂದಕ್ಕೆ ಬರಲಿವೆ ಎಂದು ವಿಶ್ವ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಕೋಫಿ ಅನ್ನಾನ್ ತಿಳಿಸಿದ್ದಾರೆ. ಅಮೆರಿಕಾ ದುರಂತದ ನಂತರ ಭಯೋತ್ಪಾದನೆಯ ಬಗ್ಗೆ ನಡೆಯುವ ಮೊದಲ ಜಾಗತಿಕ ಚರ್ಚೆ ಅಕ್ಟೋಬರ್ 1ರಂದು ನಡೆಯಲಿದ್ದು, ಅಂತರರಾಷ್ಟ್ರೀಯ ಭಯೋತ್ಪಾದನೆ ಮನಕುಲಕ್ಕಿರುವ ಗಂಭೀರ ಬೆದರಿಕೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಬೆಲ್ಜಿಯಂನ ವಿಶ್ವಸಂಸ್ಥೆ ರಾಯಭಾರಿ ಜೀನ್ ಡಿ ರಯ್ಟ್ ಅಭಿಪ್ರಾಯಪಟ್ಟಿದ್ದಾರೆ.
ನ್ಯೂಯಾರ್ಕ್ ದುರಂತದಿಂದಾಗಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದು ಕಷ್ಟವಾದ್ದರಿಂದ ವಿವಿಧ ರಾಷ್ಟ್ರಗಳ ನಾಯಕರ ವಾರ್ಷಿಕ ಸಭೆಯನ್ನು ಮುಂದೂಡಲಾಗಿತ್ತು. ಆದರೆ ರಾಯಭಾರಿಗಳು ಮಾತ್ರ ನ್ಯೂಯಾರ್ಕ್ನಲ್ಲೇ ಇದ್ದು ತಮ್ಮ ತಮ್ಮ ದೇಶವನ್ನು ಪ್ರತಿನಿಧಿಸಲಿದ್ದಾರೆ. ಈ ಸಭೆಯ ದಿನಾಂಕ ನಿರ್ಣಯವಾಗಿಲ್ಲ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications