ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುವೆಂಪುಗೆ ಮರಣೋತ್ತರ ಭಾರತರತ್ನ- ಕೇಂದ್ರಕ್ಕೆ ಶಿಫಾರಸು

By Staff
|
Google Oneindia Kannada News

ಬೆಂಗಳೂರು : ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ಮರಣೋತ್ತರ ಭಾರತರತ್ನ ಪುರಸ್ಕಾರ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರಕಾರ ಶಿಫಾರಸು ಮಾಡಿದೆ.

ಪದ್ಮ ಪ್ರಶಸ್ತಿಗಳಿಗೆ ಶಿಫಾರಸು ಮಾಡಲು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಸಮಿತಿಯು ಶುಕ್ರವಾರ ಸಭೆ ಸೇರಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಆಯ್ಕೆ ಮಾಡಿದೆ.

ಸಾಹಿತ್ಯ ಕ್ಷೇತ್ರದಲ್ಲಿನ ಗಣನೀಯ ಸೇವೆ ಸಲ್ಲಿಸಿರುವ ಶತಾಯುಷಿ ಎ.ಎನ್‌. ಮೂರ್ತಿರಾವ್‌, ಜಿ.ಎಸ್‌. ಶಿವರುದ್ರಪ್ಪ, ಕೆ.ಎಸ್‌. ನಿಸಾರ್‌ ಅಹ್ಮದ್‌, ರಂಗಕ್ಷೇತ್ರದ ಏಣಗಿ ಬಾಳಪ್ಪ, ಮಾಸ್ಟರ್‌ ಹಿರಣ್ಣಯ್ಯ, ಚಿತ್ರರಂಗದಲ್ಲಿ ನಾಯಕ ನಟ ವಿಷ್ಣುವರ್ಧನ್‌, ನಟಿ ಜಯಂತಿ, ಚಿತ್ರಕಲೆಯಲ್ಲಿ ಹಡಪದ್‌, ಬುರ್ನಾಪುರ್‌, ವೈದ್ಯಕೀಯ ವಿಭಾಗದಲ್ಲಿ ಆರ್‌.ಬಿ. ಪಾಟೀಲ್‌, ಸಂಗೀತ ಕ್ಷೇತ್ರದಲ್ಲಿ ಪಂಡಿತ್‌ ಪುಟ್ಟರಾಜ ಗವಾಯಿ ಅವರ ಹೆಸರುಗಳನ್ನು ಶಿಫಾರಸು ಮಾಡಲು ಸಭೆ ನಿರ್ಧರಿಸಿದೆ.

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X