Get Updates
Get notified of breaking news, exclusive insights, and must-see stories!

ರಾಜ್ಯದಿಂದ 700ಕೋಟಿ ರು. ಜಲಾನಯನ ಅಭಿವೃದ್ಧಿ ಯೋಜನೆ

ಬೆಂಗಳೂರು : ವಿಶ್ವಬ್ಯಾಂಕ್‌ ನೆರವಿನ 700 ಕೋಟಿ ರುಪಾಯಿ ವೆಚ್ಚದ ಜಲಾನಯನ ಅಭಿವೃದ್ಧಿ ಯೋಜನೆಯನ್ನು ಕರ್ನಾಟಕ ಸರಕಾರ ಹಮ್ಮಿಕೊಂಡಿದೆ. ಶನಿವಾರ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ರಾಜ್ಯದ ಐದು ಜಿಲ್ಲೆಗಳ ಸುಮಾರು ಹತ್ತು ಲಕ್ಷ ಎಕರೆ ಭೂಮಿ ಈ ಯೋಜನೆಯ ವ್ಯಾಪ್ತಿಯಲ್ಲಿ ಸೇರಿದೆ.

ಮುಂದಿನ ಐದು ವರ್ಷಗಳ ಅವಧಿಯಲ್ಲಿ ಪೂರ್ಣಗೊಳ್ಳಲಿರುವ ಈ ಯೋಜನೆಗೆ ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ ಹಾಗೂ ಧಾರವಾಡದ 1270 ಹಳ್ಳಿಗಳು ಒಳಪಡಲಿವೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಕೃಷಿ ಸಚಿವ ಟಿ.ಬಿ. ಜಯಚಂದ್ರ ಅವರು ವಿಶ್ವಬ್ಯಾಂಕ್‌ ನೆರವಿನ ಈ ಯೋಜನೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಯೋಜನೆಯ ಜಾರಿಯ ಬಗ್ಗೆ ನಿಗಾ ವಹಿಸಲು ಜಾಗೃತ ದಳವನ್ನು ರಚಿಸಲಾಗುವುದು ಎಂದರು. ವಿಶ್ವಬ್ಯಾಂಕ್‌ ನೆರವಿನಲ್ಲಿ ಕರ್ನಾಟಕ ರಾಜ್ಯ ಸರಕಾರ ಕೈಗೊಂಡಿರುವ ಅತಿ ದೊಡ್ಡ ಜಲಾನಯನ ಅಭಿವೃದ್ಧಿ ಯೋಜನೆ ಇದಾಗಿದೆ ಎಂದು ಜಯಚಂದ್ರ ವಿವರಿಸಿದರು.

(ಪಿ.ಟಿ.ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+