ಸೆಪ್ಟೆಂಬರ್ ಅಂತ್ಯಕ್ಕೆ ತಮಿಳುನಾಡಿಗೆ 15 ಟಿಎಂಸಿ ನೀರು : ಎಚ್ಕೆ ಪಾಟೀಲ್
ನವದೆಹಲಿ : ಸೆಪ್ಟೆಂಬರ್ ಅಂತ್ಯದ ಹೊತ್ತಿಗೆ ಮೆಟ್ಟೂರು ಜಲಾಶಯಕ್ಕೆ 15 ಟಿಎಂಸಿ ನೀರು ಬಿಡುವುದಾಗಿ ಕೇಂದ್ರ ಜಲ ಸಂಪನ್ಮೂಲ ಖಾತೆ ಸಚಿವ ಅರ್ಜುನ್‌ಚರಣ್ ಸೇಠಿ ಅವರಿಗೆ ಕರ್ನಾಟಕ ಸರ್ಕಾರ ಭರವಸೆ ಕೊಟ್ಟಿದೆ.
ಶನಿವಾರ ಸಂಜೆ ಸಚಿವ ಸೇಠಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ಭಾರೀ ನೀರಾವರಿ ಸಚಿವ ಎಚ್.ಕೆ.ಪಾಟೀಲ್ ಈ ಭರವಸೆ ನೀಡಿದರು. ಶನಿವಾರ ನಡೆಯಬೇಕಿದ್ದ ಕಾವೇರಿ ಪ್ರಾಧಿಕಾರದ ಸಭೆ ರದ್ದಾದ ಕಾರಣ ಎಚ್.ಕೆ.ಪಾಟೀಲ್, ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಇತ್ತೀಚೆಗೆ ನಡೆದ ಕಾವೇರಿ ಪ್ರಾಧಿಕಾರದ ಉಸ್ತುವಾರಿ ಸಮಿತಿ ಸಭೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡಿಗೆ ಕನಿಷ್ಠ 15 ಟಿಎಂಸಿ ನೀರನ್ನಾದರೂ ಬಿಡುವಂತೆ ಕಾರ್ಯದರ್ಶಿ ಬಿ.ಎನ್.ನವಾಲಾವಾಲಾ ಸೂಚಿಸಿದ್ದರು. ಕರ್ನಾಟಕದಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದೆ. ಈ ತಿಂಗಳ ಮೂರೇ ದಿನಗಳಲ್ಲಿ (19, 20 ಮತ್ತು 21ರಂದು) ಒಟ್ಟು 4.91 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಟ್ಟಿದೆ. ಇದೇ ರೀತಿಯಲ್ಲಿ ನೀರು ಬಿಟ್ಟರೆ ತಮಿಳುನಾಡಿಗೆ ಹರಿಸುವ ನೀರಿನ ಪ್ರಮಾಣ 25 ಟಿಎಂಸಿಯಷ್ಟಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವರಿಗೆ ಪಾಟೀಲ್ ತಿಳಿಸಿದರು.
ಮೆಟ್ಟೂರು ಜಲಾಶಯದಲ್ಲಿ ಈಗ 12 ಟಿಎಂಸಿ ನೀರು ಇದ್ದು, ಕುರುವೈ ಬೆಳೆಗೆ ಹಾನಿಯಾಗದು. ಕರ್ನಾಟಕದಿಂದಲೂ ನಾವು ಭರವಸೆ ಕೊಟ್ಟಿರುವಷ್ಟು ನೀರು ಹರಿಸುತ್ತೇವೆ. ಇದರಿಂದ ಸಮಸ್ಯೆಗೆ ಸದ್ಯಕ್ಕೆ ತೆರೆಬೀಳಲಿದೆ ಎಂದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications