ಹುಬ್ಬಳ್ಳಿಯಲ್ಲಿ 3 ವರ್ಷ ಧಾರ್ಮಿಕ ಮೆರವಣಿಗೆಗಳಿಗೆ ಕಡ್ಡಾಯ ರಜೆ?
ಬೆಂಗಳೂರು : ಕೋಮು ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಹುಬ್ಬಳ್ಳಿ ನಗರದಲ್ಲಿ ಮೂರರಿಂದ ಐದು ವರ್ಷಗಳ ಕಾಲ ಎಲ್ಲ ರೀತಿಯ ಧಾರ್ಮಿಕ ಮೆರವಣಿಗೆಗಳನ್ನು ರದ್ದು ಮಾಡುವ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ಧಾರ್ಮಿಕ ಮೆರವಣಿಗೆಗಳನ್ನು ಸ್ವಲ್ಪ ಕಾಲ ರದ್ದು ಮಾಡಲು ಸದ್ಭಾವನಾ ಸಮಿತಿ ಶಿಫಾರಸ್ಸು ಮಾಡಿದ್ದು , ಈ ಶಿಫಾರಸ್ಸನ್ನು ಅನುಷ್ಠಾನಗೊಳಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಮಿಕ ಮತ್ತು ವಕ್ಫ್ ಖಾತೆ ಸಚಿವ ಎ.ಎಂ. ಹಿಂಡಸಗೇರಿ ಹೇಳಿದರು.
ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಡಾ.ಆರ್.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ರೂಪಿಸಲಾಗಿರುವ ಸದ್ಭಾವನಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಹಲವರ ಬೆಂಬಲವೂ ವ್ಯಕ್ತವಾಗಿದೆ. ಈ ಶಿಫಾರಸ್ಸಿನ ಬಗ್ಗೆ ಸರ್ವ ಸಮ್ಮತಿ ಕಂಡುಕೊಳ್ಳುವಂತೆ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎಂದು ಹಿಂಡಸಗೇರಿ ತಿಳಿಸಿದರು.
ಈದ್ಗಾ ಮೈದಾನದ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವಂತೆ ಕಳೆದ ತಿಂಗಳು ಸುಪ್ರಿಂಕೋರ್ಟ್ ಸಲಹೆ ಮಾಡಿದೆ. ಇದರನ್ವಯ ಕಾನೂನು ಮತ್ತು ಸಂಸದೀಯ ಸಚಿವರು, ವಿರೋಧಿ ಮುಖಂಡರು ಹಾಗೂ ಇತರ ಗಣ್ಯರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications