ಹಿಂಗಾರು ಚುರುಕು : ಲೋಡ್ಷೆಡ್ಡಿಂಗ್ ನಿರ್ಧಾರ ಪುನರ್ಪರಿಶೀಲನೆ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟರೂ, ಹಿಂಗಾರು ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಲೋಡ್ ಷೆಡ್ಡಿಂಗ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ಇಂಧನ ಸಚಿವ ವೀರಕುಮಾರ್ ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಲೋಡ್ ಷೆಡ್ಡಿಂಗ್ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಕೋರಿ ಕೆಪಿಟಿಸಿಎಲ್ ಪ್ರಸ್ತಾವನೆ ಕಳಿಸಿತ್ತು ಆದರೆ, ವಿದ್ಯುತ್ ಕಡಿತ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಕೆ.ಪಿ.ಟಿ.ಸಿ.ಎಲ್ಗೆ ಸೂಚಿಸಲಾಗಿದೆ ಎಂದೂ ಅವರು ಹೇಳಿದರು.
ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿದಿತ್ತು. ಹೀಗಾಗಿ ವಿದ್ಯುತ್ ಲೋಡ್ಷೆಡ್ಡಿಂಗ್ ಜಾರಿ ಮಾಡುವ ನಿರ್ಧಾರವನ್ನು ಕೆ.ಪಿ.ಟಿ.ಸಿ.ಎಲ್. ತೆಗೆದುಕೊಂಡಿತ್ತು. ಈಗ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ವಿದ್ಯುತ್ ಉತ್ಪಾದನೆ ಹೆಚ್ಚುವ ಸಂಭವ ಇದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ 59,351 ಮಿಲಿಯನ್ ಯುನಿಟ್ ವಿದ್ಯುತ್ ಬೇಡಿಕೆ ಇದೆ. 22,974 ಮಿಲಿಯನ್ ಯುನಿಟ್ ಅನ್ನು ಬೇರೆಡಿಯಿಂದ ತರಿಸಿಕೊಳ್ಳಲಾಗುತ್ತಿದೆ. ಕೇಂದ್ರ ವಿದ್ಯುತ್ ಜಾಲದಿಂದ 300 ಮೆಗಾ ಯುನಿಟ್ ವಿದ್ಯುತ್ ಪಡೆವ ಸಂಬಂಧ ವ್ಯವಹಾರ ಪ್ರಗತಿಯಲ್ಲಿದ್ದು, ಕೇಂದ್ರ ಸಮ್ಮತಿ ಸಿಕ್ಕ ಕೂಡಲೇ ರಾಜ್ಯ ಸರಕಾರ ವಿದ್ಯುತ್ ಖರೀದಿಸುವುದು ಎಂದು ಅವರು ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications