ಸೇಲಂ- ಬೆಂಗಳೂರು ರೈಲಿಗೆ ಸಿಕ್ಕಿ ಮೂವರು ಹೆಂಗಸರ ಸಾವು
ಬೆಂಗಳೂರು : ಹೊಸದಾಗಿ ಮದುವೆಯಾಗಿದ್ದ ಒಬ್ಬ ಹೆಂಗಸೂ ಸೇರಿದಂತೆ ಮೂವರು ಮಹಿಳೆಯರು ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಸತ್ತಿದ್ದು, ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರ ಹೊರವಲಯದಲ್ಲಿ ಬುಧವಾರ ರಾತ್ರಿ ನಡೆದಿದೆ.
ಎಚ್ಎಎಲ್ ಸಮೀಪದ ದೊಡ್ಡಾನೆಕುಂದಿಯ ಭಾರತಿ (30), ದೇವೀರಮ್ಮ (25) ಹಾಗೂ ರತ್ನ (18) ಎಂಬುವರೇ ಮೃತಪಟ್ಟ ನತದೃಷ್ಟರು. ಇವರೆಲ್ಲಾ ಎಚ್ಎಲ್ ಸಮೀಪದ ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕರು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ರೈಲ್ವೆ ಸೇತುವೆ ಬಳಿ ಈ ದುರಂತ ಸಂಭವಿಸಿದೆ.
ಸೇಲಂನಿಂದ ಬೆಂಗಳೂರಿಗೆ ತಲುಪುತ್ತಿದ್ದ ರೈಲಿಗೆ ಸುಮಾರು 7.30ರ ವೇಳೆಗೆ ಸಿಕ್ಕಿರುವ ಮೂವರ ಪೈಕಿ ಇಬ್ಬರ ದೇಹಗಳು ಛಿದ್ರಛಿದ್ರವಾಗಿವೆ. ರತ್ನ ಎಂಬುವರ ಎರಡೂ ಕಾಲುಗಳು ಮುರಿದಿದ್ದು, ರಕ್ತಸ್ರಾವದಿಂದ ಮೃತ ಪಟ್ಟಿದ್ದಾರೆ. ಇವರ ಜೊತೆಯಲ್ಲಿಯೇ ಮನೆಗೆ ತೆರಳುತ್ತಿದ್ದ ಇತರೆ ನಾಲ್ವರು ಹೆಂಗಸರು ರೈಲನ್ನು ನೋಡಿ ಭಯದಿಂದ ಸೇತುವೆಯಿಂದ ರಿಂಗ್ ರಸ್ತೆಗೆ ಜಿಗಿದ ಕಾರಣ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications