ಮುಳೂರು ಘಾಟ್ ಬಳಿ ಟ್ರಾಕ್ಟರ್ ಉರುಳಿ 8 ಜನರ ಸಾವು
ಬೆಂಗಳೂರು : ಬೆಳಗಾವಿ ಜಿಲ್ಲೆ ರಾಮದುರ್ಗ ಸಮೀಪದ ಮುಳೂರು ಘಾಟ್ ಬಳಿ ಗುರುವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಟ್ರಾಕ್ಟರ್ ಒಂದು ಹಳ್ಳಕ್ಕೆ ಉರುಳಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇವರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ.
ಸಂಬಂಧಿಕರೊಬ್ಬರ ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ಇವರು ತಾವೇ ಶವವಾಗಿ ಹೋದರು. ರಾಮದುರ್ಗದಿಂದ ಸಿರಸಿಂಗಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರಾಕ್ಟರ್ನಲ್ಲಿ ಸುಮಾರು 50ಜನರು ಪ್ರಯಾಣಿಸುತ್ತಿದ್ದರು. ಮುಳೂರು ಘಾಟ್ ತಿರುವಿನ ಬಳಿ ಅತಿ ವೇಗದಿಂದ ಬರುತ್ತಿದ ಟ್ರಾಕ್ಟರ್ ಹತೋಟಿ ತಪ್ಪಿ ಹಳ್ಳಕ್ಕೆ ಉರುಳಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಸಾವನ್ನಪ್ಪಿದ ಎಂಟು ಜನರ ಪೈಕಿ ಐವರು ಒಂದೇ ಕುಟುಂಬದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ರಾಮದುರ್ಗ ಮತ್ತು ಬೆಳಗಾವಿಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಸಾವನ್ನಪ್ಪಿದ ನಾಲ್ವರನ್ನು ರಾಮದುರ್ಗದ ಭೀಮವ್ವ, ಗಂಗವ್ವ, ಲಚ್ಚಮ್ಮ, ಶಾಂತವ್ವ ಸೆಲೆಗಾರ ಎಂದು ಗುರುತಿಸಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications