ಬೆಂಗಳೂರಿನ ಐವರು ವಿಜ್ಞಾನಿಗಳಿಗೆ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ
ನವದೆಹಲಿ : ಪ್ರತಿಷ್ಠಿತ ರಾಷ್ಟ್ರೀಯ ಪುರಸ್ಕಾರ ಶಾಂತಿ ಸ್ವರೂಪ ಭಟ್ನಾಗರ್ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಜ್ಞಾನಿಗಳಲ್ಲಿ ಐವರು ಬೆಂಗಳೂರಿನವರು ಎಂದು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಆರ್ಐ) ಮಹಾ ನಿರ್ದೇಶಕ ಡಾ.ಆರ್.ಎ.ಮಾಶೇಲ್ಕರ್ ತಿಳಿಸಿದ್ದಾರೆ.
2001ನೇ ಇಸವಿಯ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ ಮಾಶೇಲ್ಕರ್, ಎಂಜಿನಿಯರಿಂಗ್ ವಿಜ್ಞಾನ ವಿಭಾಗದಲ್ಲಿ ಯಾರೂ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂದರು.
ಪ್ರಶಸ್ತಿ ಪಡೆದ ಬೆಂಗಳೂರಿನ ವಿಜ್ಞಾನಿಗಳ ವಿವರ ಇಂತಿದೆ...
ಡಾ. ಉಮೇಶ್ ವಾಶ್ನೇಯ್- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು(ಜೈವಿಕ ವಿಜ್ಞಾನ)
ಡಾ.ಪ್ರಶಾಂತ ಗೋಸ್ವಾಮಿ- ಸಿಎಸ್ಐಆರ್ ಸೆಂಟರ್ ಫಾರ್ ಮೆತೆಮ್ಯಾಟಿಕಲ್ ಮಾಡೆಲಿಂಗ್ ಅಂಡ್ ಕಂಪ್ಯೂಟರ್ ಸಿಮ್ಯುಲೇಷನ್, ಬೆಂಗಳೂರು (ಭೂಮಿ, ವಾತಾವರಣ, ಸಾಗರ ಮತ್ತು ಖಗೋಳ ವಿಜ್ಞಾನ)
ಡಾ.ರಾಹುಲ್ ಪಂಡಿತ್- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು(ಭೌತ ವಿಜ್ಞಾನ)
ಡಾ.ಗದಾಧರ ಮಿಶ್ರ- ಇಂಡಿಯನ್ ಸ್ಪಟಿಸ್ಟಿಕಲ್ ಇನ್ಸ್ಟಿಟ್ಯೂಟ್, ಬೆಂಗಳೂರು (ಸಂಖ್ಯಾ ವಿಜ್ಞಾನ)
ಡಾ.ಉದಯ್ ಮೈತ್ರ- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು(ರಾಸಾಯನಿಕ ವಿಜ್ಞಾನ).
ಪುರಸ್ಕಾರವು ಪ್ರಶಸ್ತಿ ಫಲಕ, ಬಿನ್ನವತ್ತಳಿಕೆ ಹಾಗೂ ತಲಾ 2 ಲಕ್ಷ ರುಪಾಯಿ ನಗದನ್ನು ಒಳಗೊಂಡಿದೆ ಎಂದು ಮಾಶೇಲ್ಕರ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications