ಕರಾವಳಿ ಜಿಲ್ಲೆಯ 10 ಪಟ್ಟಣ ಅಭಿವೃದ್ಧಿಗೆ 1056 ಕೋ.ರು. ಯೋಜನೆ
ಬೆಂಗಳೂರು : ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಕೈಗೆತ್ತಿಕೊಂಡಿರುವ ಎಲ್ಲ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನೂ ಪೂರ್ಣಗೊಳಿಸಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ. ಈ ವಿಷಯವನ್ನು ಕಾನೂನು ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದ್ದಾರೆ.
ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ಎ.ಡಿ.ಬಿ. ಒದಗಿಸಿರುವ 510 ಕೋಟಿ ರುಪಾಯಿಗಳ ನೆರವಿನ ಸದ್ಬಳಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಡಿಬಿ ನೆರವಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಹುತೇಕ ಕಾಮಗಾರಿಗಳು ಮುಗಿದಿವೆ. ಈಗಾಗಲೇ 374 ಕೋಟಿ ರುಪಾಯಿಗಳನ್ನು ಮೈಸೂರು, ತುಮಕೂರು, ರಾಮನಗರ ಮತ್ತು ಚನ್ನಪಟ್ಟಣ ನಗರಗಳ ಅಭಿವೃದ್ದಿಗೆ ಬಳಸಲಾಗಿದೆ ಎಂದು ವಿವರಿಸಿದರು.
ಗುತ್ತಿಗೆದಾರರು ಸೃಷ್ಟಿಸಿರುವ ಸಮಸ್ಯೆಗಳಿಂದಾಗಿ ಕೆಲವು ಕಾಮಗಾರಿಗಳು ಪೂರ್ಣವಾಗದೇ ಹಾಗೇ ಉಳಿದಿವೆ ಎಂದು ಹೇಳಿದ ಅವರು, ವಿವರ ನೀಡಲು ನಿರಾಕರಿಸಿದರು. ಒಂದೊಮ್ಮೆ ನಿಗದಿತ ಅವಧಿಯಾಳಗೆ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೆ, ಎಡಿಬಿ ನೆರವಿನ ಬಳಕೆಗೆ ಸರಕಾರ ಕಾಲಾವಕಾಶ ಕೋರಬೇಕಾಗುತ್ತದೆ ಎಂದರು.
ಕೆಲಸ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಬದಲಾಯಿಸಲೂ ರಾಜ್ಯ ಸರಕಾರ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು. ಕರಾವಳಿ ಜಿಲ್ಲೆಗಳ 10 ಪಟ್ಟಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ 1056 ಕೋಟಿ ರುಪಾಯಿಗಳ ಹೊಸ ಯೋಜನೆಯಾಂದು ಜಾರಿಯ ಹಂತದಲ್ಲಿದೆ ಎಂದೂ ಚಂದ್ರೇಗೌಡ ಹೇಳಿದರು.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications