Get Updates
Get notified of breaking news, exclusive insights, and must-see stories!

ಮಂಡ್ಯ ಬಳಿ ಲಾರಿಗಳ ಮುಖಾಮುಖಿ : 2 ಸಾವು, 8 ಮಂದಿಗೆ ಗಾಯ

ಮಂಡ್ಯ : ಕಿರಂದೂರು ಗೇಟ್‌ ಬಳಿ ಶುಕ್ರವಾರ ಸಂಜೆ ಎರಡು ಲಾರಿಗಳ ಮುಖಾಮುಖಿ ಡಿಕ್ಕಿಯಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 8 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

ಶ್ರೀರಂಗಪಟ್ಟಣದಿಂದ ಮಂಡ್ಯಕ್ಕೆ ಜಲ್ಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಕೆಎಸ್ಸಾರ್ಟಿಸಿ ಬಸ್ಸೊಂದನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಅತಿ ವೇಗವಾಗಿ ಚಲಿಸುತ್ತಿದ್ದಾಗ ಮುಖಾಮುಖಿಯಾದ ಪರಿಣಾಮ ಲಾರಿಗಳು ನುಜ್ಜುಗುಜ್ಜಾಗಿವೆ. ಎರಡೂ ಲಾರಿಯಲ್ಲಿದ್ದವರ ಪೈಕಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದು, ಮಧ್ಯಮ ವಯಸ್ಕರಾಗಿದ್ದಾರೆ. ಮೃತ ಪಟ್ಟವರ ಹೆಸರು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿಗಳ ಅಡಿಯಲ್ಲಿ ಸಿಕ್ಕಿದ್ದ ಗಾಯಾಳುಗಳು ಹೊರಬರಲು ಶತಾಯಗತಾಯ ಯತ್ನಿಸಿದ್ದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+