ಹಳ್ಳಿಗಳತ್ತ ಐಟಿ ಅಭಿಯಾನಕ್ಕೆ ಇನ್ಫೋಸಿಸ್ ಇಂಧನ- ಕೃಷ್ಣ ಶ್ಲಾಘನೆ
ಮಂಗಳೂರು: ಮಾಹಿತಿ ತಂತ್ರಜ್ಞಾನವನ್ನು ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಒಯ್ಯುವ ಸರ್ಕಾರದ ಅಭಿಯಾನದಲ್ಲಿ ಎನ್.ಆರ್. ನಾರಾಯಣಮೂರ್ತಿ ನೇತೃತ್ವದ ಇನ್ಫೋಸಿಸ್ ಪ್ರಮುಖ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಶ್ಲಾಘಿಸಿದ್ದಾರೆ.
ಮಂಗಳೂರಿನ ಕೊಟ್ಟಾರದಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್ ನಿರ್ಮಿಸಿರುವ ಇನ್ಫೋಸಿಸ್-ಮಂಗಳಾ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮುಖ್ಯಮಂತ್ರಿ ಮಾತನಾಡುತ್ತಿದ್ದರು. ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನಗಳಂಥ ಆಧುನಿಕ ತಂತ್ರಜ್ಞಾನಗಳು ಕೇವಲ ನಗರ ಪ್ರದೇಶದವರಿಗೆ ಮಾತ್ರ ಸೀಮಿತವಾಗಬಾರದು. ಆಧುನಿಕ ತಂತ್ರಜ್ಞಾನಗಳು ಗ್ರಾಮೀಣ ಪ್ರದೇಶಗಳಿಗೆ ನಿಲುಕಿಸಲು ಹಾಗೂ ಐಟಿ ಬೆಂಗಳೂರಿಗೆ ಮಾತ್ರ ಎನ್ನುವ ಜನಮನದ ಅಭಿಪ್ರಾಯವನ್ನು ಬದಲಿಸಲು ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಅವರು ಹೇಳಿದರು.
ಐಟಿ ಮೂಲಕ ಪ್ರತ್ಯಕ್ಷ ಉದ್ಯೋಗಗಳು ಮಾತ್ರವಲ್ಲದೆ ಪರೋಕ್ಷ ಉದ್ಯೋಗಗಳನ್ನೂ ಇನ್ಫೋಸಿಸ್ ಕಲ್ಪಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಷೋಕೇಸ್‌ನಂತೆ ಇನ್ಫೋಸಿಸ್ ಬೆಳೆದಿದೆ ಎಂದು ಕೃಷ್ಣ ಬಣ್ಣಿಸಿದರು. ಇನ್ಫೋಸಿಸ್- ಮಂಗಳಾ ರಫ್ತು ಆದಾಯ ಮೂಲವಾಗಿ ಬೆಳೆಯುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಇನ್ಫೋಸಿಸ್‌ನಿಂದ ಉತ್ತಮ ಉದ್ಯೋಗಾವಕಾಶಗಳು
ಭವಿಷ್ಯದ ಜನಾಂಗಕ್ಕೆ ಅತ್ಯುತ್ತಮ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಮಂಗಳಾ ಕಲ್ಪಿಸುತ್ತದೆ. ಉತ್ತಮ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಎಲ್ಲ ಕಂಪನಿಗಳನ್ನೂ ಮಂಗಳೂರಿನ ಜನತೆ ಪ್ರೋತ್ಸಾಹಿಸಬೇಕು ಎಂದು ಎನ್.ಆರ್. ನಾರಾಯಣಮೂರ್ತಿ ಕರೆ ನೀಡಿದರು. ಕೇಂದ್ರ ಸಚಿವ ಧನಂಜಯಕುಮಾರ್, ಇನ್ಫೋಸಿಸ್‌ನ ಆಡಳಿತ ನಿರ್ದೇಶಕ ನಂದನ್ ಎಂ.ನೀಲೇಕಣಿ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications