ವೀರಪ್ಪನ್ನ 7 ಸಹಚರರಿಗೆ ಜೀವಾವಧಿ ಜೈಲು, 6 ಮಂದಿ ಬಿಡುಗಡೆ
ಮೈಸೂರು: ದೀರ್ಘ ವಿಚಾರಣೆಯ ನಂತರ ಕೊಲೆ ಹಾಗೂ ಸ್ಫೋಟಕಗಳ ಬಳಕೆಯ ಅಪರಾಧದ ಮೇಲೆ ಏಳು ಮಂದಿ ವೀರಪ್ಪನ್ ಸಹಚರರಿಗೆ ಇಲ್ಲಿನ ಟಾಡಾ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಮಹತ್ವದ ತೀರ್ಮಾನವನ್ನು ನೀಡಿತು.
ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ ಇತರ ಆರು ಮಂದಿ ವೀರಪ್ಪನ್ ಸಹಚರರನ್ನು ಮಾನವೀಯ ನೆಲೆಯ ಆಧಾರದ ಮೇಲೆ (ಜೈಲಿನಲ್ಲಿ ಕಾನೂನು ಬದ್ಧ ಅವಧಿ ಮುಗಿದ ಹಿನ್ನೆಲೆಯಲ್ಲಿ) ನ್ಯಾಯಾಲಯ ಬಿಡುಗಡೆ ಮಾಡಿತು. ಮತ್ತೊಬ್ಬ ಟಾಡಾ ಬಂಧಿಗೆ 2 ವರ್ಷಗಳ ಕಠಿಣ ಸೆರೆವಾಸವನ್ನು ನ್ಯಾಯಾಲಯ ವಿಧಿಸಿತು. ಟಾಡಾ ನ್ಯಾಯಾಲಯದ ನ್ಯಾಯಮೂರ್ತಿ ಡಿ.ಕೃಷ್ಣಪ್ಪ ಈ ಮಹತ್ವದ ತೀರ್ಪನ್ನು ನೀಡಿದರು.
ಟಾಡಾ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿಗಳಲ್ಲಿ , 14 ಮಂದಿಯ ಮೇಲೆ ಕೊಲೆ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳನ್ನು ಹೊರಿಸಲಾಗಿತ್ತು . ರಾಜ್ ಅಪಹರಣದ ಸಂದರ್ಭದಲ್ಲಿ ಟಾಡಾ ಬಂಧಿಗಳನ್ನು ಬಿಡುಗಡೆ ಮಾಡುವಂತೆ ವೀರಪ್ಪನ್ ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರಿದುದನ್ನು, ಸುಪ್ರಿಂಕೋರ್ಟ್ನ ಮಧ್ಯ ಪ್ರವೇಶದ ಹಿನ್ನೆಲೆಯಲ್ಲಿ ಟಾಡಾ ಬಂಧಗಳ ಬಿಡುಗಡೆ ಸಾಧ್ಯವಾಗದುದನ್ನು ಇಲ್ಲಿ ಸ್ಮರಿಸಬಹುದು.
ಜೀವಾವಧಿ ಶಿಕ್ಷೆಗೊಳಗಾದ ಖೈದಿಗಳು :
ಸೈಮನ್, ಶೇಖರ್, ಬಿಲ್ವೇಂದ್ರ, ಕಾಳಿಯಪ್ಪ , ಮೇಕೆ ಮಾದಯ್ಯ, ಜ್ಞಾನಪ್ರಕಾಶ್ ಹಾಗೂ ವೀರಸ್ವಾಮಿ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications