ವಿಮಾನ ಅಪಘಾತ: ಮಾಜಿ ಸಚಿವ ಮಾಧವರಾವ್ ಸಿಂಧ್ಯಾ ದುರ್ಮರಣ
ಕಾನ್ಪುರ: ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಸಂಭವಿಸಿದ ಖಾಸಗಿ ವಿಮಾನ ಅಪಘಾತದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮಾಧವರಾವ್ ಸಿಂಧಿಯಾ ಅವರು ಅಸುನೀಗಿದ್ದಾರೆ. ದೆಹಲಿ ಹಾಗೂ ಕಾನ್ಪುರ ನಡುವೆ ಈ ಅಪಘಾತ ಸಂಭವಿಸಿದೆ ಎಂದು ಕಾನ್ಪುರದ ವಿಮಾನ ಸಂಚಾರ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತದಲ್ಲಿ ಮಾಧವರಾವ್ ಸಿಂಧ್ಯಾ ಹಾಗೂ ನಾಲ್ವರು ಹಿರಿಯ ಪತ್ರಕರ್ತರು ಸೇರಿದಂತೆ ವಿಮಾನದಲ್ಲಿದ್ದ ಎಲ್ಲ 8 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ 12.49ಕ್ಕೆ ದೆಹಲಿ ಬಿಟ್ಟ ವಿಮಾನ 1.50ಕ್ಕೆ ಕಾನ್ಪುರ ತಲುಪಬೇಕಿತ್ತು. ಆದರೆ, ಮಾರ್ಗಮಧ್ಯೆ ಅದು ಸಂಪರ್ಕ ಕಳೆದುಕೊಂಡಿತು ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಷಹನವಾಜ್ ಹುಸೇನ್ ಪಿ.ಟಿ.ಐ. ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ದೆಹಲಿಯಿಂದ ಕಾನ್ಪುರಕ್ಕೆ ಹೊರಟ ಈ ವಿಮಾನ 2 ಗಂಟೆಗೆ ಕಾನ್ಪುರ ತಲುಪಬೇಕಿತ್ತು. ಆದರೆ, ಮಾರ್ಗ ಮಧ್ಯೆ ಮಯನ್‌ಪುರಿ ಬಳಿ ವಿಮಾನ ಅಪಘಾತಕ್ಕೀಡಾಯಿತು. ವಿಮಾನದಲ್ಲಿ ಪೈಲೆಟ್ ಸೇರಿದಂತೆ 8 ಜನ ಪ್ರಯಾಣಿಸುತ್ತಿದ್ದರು ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಶ್ರೀಪ್ರಕಾಶ್ ಜೆಸ್ವಾಲ್ ವರದಿಗಾರರಿಗೆ ತಿಳಿಸಿದ್ದಾರೆ.
ಭಾನುವಾರ ಸಂಜೆ ಕಾನ್ಪುರದಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಂಧ್ಯಾ ಅವರು ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದರು. ಅಪಘಾತದ ಹಿನ್ನೆಲೆಯಲ್ಲಿ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಸದಸ್ಯ ಅಜಯ್ ಕಪೂರ್ ಸಮಾರಂಭದಲ್ಲಿ ಪ್ರಕಟಿಸಿದ್ದಾರೆ.
ಪೈಲೆಟ್ ರಾಯ್ ಗೌತಮ್ ನಡೆಸುತ್ತಿದ್ದ ವಿಮಾನದಲ್ಲಿ ಸಿಂಧ್ಯಾ ಅವರ ಜತೆಯಲ್ಲಿ ರೂಪಿಂದರ್ ಸಿಂಗ್, ಗೋಪಾಲ್ ಬಿಸ್ಟ್ ಮತ್ತು ಅಂಜುಶರ್ಮಾ ಹಾಗೂ ಟಿ.ವಿ. ಪತ್ರಕರ್ತರೊಬ್ಬರು ಸಹ ಪ್ರಯಾಣಿಸುತ್ತಿದ್ದರು ಎಂದು ಉತ್ತರ ಪ್ರದೇಶ ಗೃಹ ಕಾರ್ಯದರ್ಶಿ ನರೇಶ್ ದಯಾಳ್ ತಿಳಿಸಿದ್ದಾರೆ.
ಕೃಷ್ಣ ದಿಗ್ಭ್ರಮೆ: ಹಿರಿಯ ಕಾಂಗ್ರೆಸ್ ನಾಯಕ ಮಾಧವರಾವ್ ಸಿಂಧ್ಯಾ ಅವರ ನಿಧನಕ್ಕೆ ಕರ್ನಾಟಕ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಕೇಳಿ ತಮಗೆ ಆಘಾತವಾಯಿತು ಎಂದ ಅವರು, ಸಿಂಧ್ಯಾ ಅವರ ನಿಧನದಿಂದ ದೇಶವು ಉತ್ಸಾಹಿ ಹಾಗೂ ಕ್ರಿಯಾಶೀಲ ರಾಜಕಾರಣಿಯಾಬ್ಬರನ್ನು ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications