ಜ್ಯೋತಿಷ್ಯ ಕಲಿಕೆಯ ಬಗ್ಗೆ ಕುಲಪತಿಗಳೇಕೆ ಮೌನ ? -ಪರಮೇಶ್ವರ್
ಮೈಸೂರು : ವಿಶ್ವವಿದ್ಯಾಲಯಗಳಲ್ಲಿ ಜ್ಯೋತಿಷ್ಯವನ್ನು ಕಲಿಸಬೇಕೇ ಬೇಡವೇ ಎಂಬ ಬಗ್ಗೆ ದೇಶಾದ್ಯಂತ ಬಿಸಿಬಿಸಿ
ಚರ್ಚೆ ನಡೆಯುತ್ತಿದ್ದರೂ ವಿಶ್ವವಿದ್ಯಾಲಯಗಳ ಕುಲಪತಿಗಳು ಮಾತ್ರ ಬಿಗುಮೌನ ತಾಳಿರುವುದೇಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ತಮ್ಮ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಅವರು ರಾಜ್ಯ ಮುಕ್ತ ವಿಶ್ವವಿದ್ಯಾಲಯ ಆಯೋಜಿಸಿದ್ದ 2 ದಿನಗಳ ದಕ್ಷಿಣ ಭಾರತ ಕುಲಪತಿಗಳ ಸಮ್ಮೇಳನವನ್ನು ಉದ್ಘಾಟಿಸಿ ಭಾನುವಾರ ಸಂಜೆ ಮಾತನಾಡುತ್ತಿದ್ದರು. ಜ್ಯೋತಿಷ್ಯ ವಿಜ್ಞಾನ ಹೌದೇ ಅಲ್ಲವೇ ಎಂಬ ಬಗ್ಗೆ ಗುಣಾತ್ಮಕವಾದ ಅಥವಾ ಋಣಾತ್ಮಕವಾದ ಅಪ್ರಾಯವನ್ನು ತಿಳಿಸಬೇಕು. ಈ ರೀತಿ ಮೌನವಾಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಚಿವರು ಸಿಡಿಮಿಡಿಗೊಂಡು ಪ್ರಶ್ನಿಸಿದರು.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರ ಅಭಿಪ್ರಾಯಕ್ಕೆ ವಿರುದ್ಧವಾಗಿ ಮಾತನಾಡಿದರೆ ಎಲ್ಲಿ ತಮ್ಮ ವಿವಿಯ ಅನುದಾನ ತಪ್ಪಿ ಹೋಗುತ್ತದೋ ಎಂದು ಕುಲಪತಿಗಳೆಲ್ಲರೂ ಆತಂಕಗೊಂಡಿರುವಂತೆ ಕಂಡು ಬರುತ್ತದೆ. ಅಭಿಪ್ರಾಯ ಸ್ವಾತಂತ್ರ್ಯದ ಬಗ್ಗೆ ಕುಲಪತಿಗಳಿಗೆ ತಿಳಿದಿಲ್ಲವೇನೋ ಎಂದು ಪರಮೇಶ್ವರ್ ಗೇಲಿಯಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ವಿಶ್ವವಿದ್ಯಾಲಯ ಸಂಘದ ಅಧ್ಯಕ್ಷ ಡಾ. ಎಚ್. ಪಿ. ದೀಕ್ಷಿತ್ ವಹಿಸಿದ್ದರು.
(ಇನ್ಪೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications