ಎರಡು ಲಕ್ಷ ಎಕರೆ ಭೂಮಿಗೆ ನೀರುಣಿಸುವ19 ಯೋಜನೆಗಳಿಗೆ ಅಸ್ತು
ಬೆಂಗಳೂರು : 2 ಲಕ್ಷ ಎಕರೆ ಭೂಮಿಗೆ ನೀರುಣಿಸುವ 430 ಕೋಟಿ ರುಪಾಯಿ ಬಂಡವಾಳದ 19 ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬೃಹತ್ ನೀರಾವರಿ ಯೋಜನೆ ನಿಯಂತ್ರಣ ಮಂಡಳಿ ಸೋಮವಾರ ಅನುಮತಿ ನೀಡಿದೆ.
ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನೇತೃತ್ವದಲ್ಲಿ ಸೋಮವಾರ ಜರುಗಿದ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಗುಲ್ಬರ್ಗಾ ಜಿಲ್ಲೆಯಲ್ಲಿ ಭೀಮಾ ನದಿಗೆ, ಬೀದರ್ ಜಿಲ್ಲೆಯಲ್ಲಿ ಮಾಂಜ್ರಾ ನದಿಗೆ ಅಡ್ಡಲಾಗಿ ಕಟ್ಟುವ ಬ್ಯಾರೇಜ್ಗಳು ಸೇರಿದಂತೆ ನಾಲ್ಕು ಬ್ಯಾರೇಜ್ಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಅನುಮತಿ ನೀಡಿದರು ಎಂದು ಜಲ ಸಂಪನ್ಮೂಲ ಸಚಿವ ಎಚ್.ಕೆ.ಪಾಟೀಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಸಭೆ ಕೈಗೊಂಡ ನಿರ್ಣಯಗಳ ವಿವರ-
- 124 ಕೋಟಿ ರುಪಾಯಿ ವೆಚ್ಚದಲ್ಲಿ ದೂದ್ಗಂಗಾ ಯೋಜನೆಯನ್ನು ಪೂರ್ಣಗೊಳಿಸುವುದು. ದೂದ್ಗಂಗಾದಿಂದ 4 ಟಿಎಂಸಿ ನೀರು ಈ ಯೋಜನೆಯಿಂದ ದೊರೆಯಲಿದ್ದು , 40 ಸಾವಿರ ಎಕರೆ ಭೂಮಿಗೆ ನೀರು ಸಿಗಲಿದೆ.
- ಬೆಟ್ಟರಗಿ ಬಳಿ ಭೀಮಾ ನದಿಗೆ 13.42 ಕೋಟಿ ರುಪಾಯಿ ವೆಚ್ಚದಲ್ಲಿ ಬ್ಯಾರೇಜು ನಿರ್ಮಾಣ, 1890 ಎಕರೆ ಭೂಮಿಗೆ ನೀರು.
- 15.04 ಕೋಟಿ ರುಪಾಯಿ ವೆಚ್ಚದಲ್ಲಿ ಕ್ಲೊಲೂರು-ಬಿ ಯೋಜನೆ ಪೂರ್ಣ, 1980 ಎಕರೆ ಭೂಮಿಗೆ ನೀರು.
- 1935 ಎಕರೆ ಪ್ರದೇಶಕ್ಕೆ ನೀರುಣಿಸುವ ಯಾದಗಿರ್ ಯೋಜನೆ 12.56 ಕೋಟಿ ರುಪಾಯಿ ವೆಚ್ಚದಲ್ಲಿ ಪೂರ್ಣಗೊಳಿಸುವುದು.
- 1960 ಎಕರೆ ಜಲಾನಯನ ಪ್ರದೇಶ ಕಲ್ಪಿಸುವ ಜೋಲದಡಗಿ ಯೋಜನೆಯನ್ನು 15.58 ಕೋಟಿ ರುಪಾಯಿ ವೆಚ್ಚದಲ್ಲಿ ಪೂರ್ಣಗೊಳಿಸುವುದು.
- ಕೃಷ್ಣ ಭಾಗ್ಯ ಜಲ ನಿಗಮ ಲಿಮಿಟೆಡ್ ಹಾಗೂ ಕರ್ನಾಟರ ನೀರಾವರಿ ನಿಗಮ ಲಿಮಿಟೆಡ್ ಅಡಿಯಲ್ಲಿ ಯೋಜನೆಗಳ ಕಾಮಗಾರಿ ನಡೆಯಲಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications