ರಾಯಚೂರು: 350 ಹಾಸಿಗೆ ಸಾಮರ್ಥ್ಯದ ಹೈಟೆಕ್ ಆಸ್ಪತ್ರೆಗೆ ಅಪೊಲೊ ರಂಗು
ಬೆಂಗಳೂರು : 350 ಹಾಸಿಗೆಗಳ ಸಾಮರ್ಥ್ಯದ ಉತ್ತರ ಕರ್ನಾಟಕದ ರಾಯಚೂರಿನ ಹೈಟೆಕ್ ಆಸ್ಪತ್ರೆಯ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆ ಹಾಗೂ ಅಪೊಲೊ ಹಾಸ್ಪಿಟಲ್ಸ್ ಎಂಟರ್‌ಪ್ರೆೃಸ್ ಲಿಮಿಟೆಡ್ ಮಹತ್ವದ ಒಪ್ಪಂದವೊಂದಕ್ಕೆ ಸೋಮವಾರ ಸಹಿ ಹಾಕಿವೆ.
ಒಪ್ಪಂದದ ಪ್ರಕಾರ-
ಸಾಮಾನ್ಯ ಸೇವೆಗಳ ಜೊತೆಗೆ ಕಾರ್ಡಿಯಾಲಜಿ, ನ್ಯೂರಾಲಜಿ, ನ್ಯೂರೋ ಸರ್ಜರಿ, ಯೂರಾಲಜಿ, ನೆಫ್ರಾಲಜಿ ಹಾಗೂ ಗ್ಯಾಸ್ಟ್ರೋಎಂಟರಾಲಜಿ ಕ್ಷೇತ್ರಗಳಲ್ಲಿ ತೃತೀಯ ಹಂತದಲ್ಲಿ ಸೇವೆಗಳನ್ನು ಅಪೊಲೊ ಆಸ್ಪತ್ರೆ ಲಿಮಿಟೆಡ್ ಒದಗಿಸಲಿದೆ ಎಂದು ಆರೋಗ್ಯ ಸಚಿವ ಡಾ.ಮಲಕರೆಡ್ಡಿ ಒಪ್ಪಂದದ ನಂತರ ಸುದ್ದಿಗಾರರಿಗೆ ತಿಳಿಸಿದರು.
ವಿಯೆನ್ನಾದ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ನಿಧಿ ಸಹಕಾರದಲ್ಲಿ , 35 ಕೋಟಿ ರುಪಾಯಿಗಳ ವೆಚ್ಚದಲ್ಲಿ ರಾಯಚೂರು ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಪೊಲೊದ ಐವರು ಹಾಗೂ ಸರ್ಕಾರದ ಆರು ಮಂದಿ ಸದಸ್ಯರು ಈ ಆಸ್ಪತ್ರೆಯ ನಿರ್ವಹಣಾ ಸಮಿತಿಯಲ್ಲಿರುತ್ತಾರೆ. ಹಾಸಿಗೆಗಳ ಶುಲ್ಕದಲ್ಲಿ ಬಡರೋಗಿಗಳು ಪ್ರತಿಶತ 40 ರ ರಿಯಾಯಿತಿ ಪಡೆಯಲಿದ್ದು , ರಾಜ್ಯ ಸರ್ಕಾರ ರಿಯಾಯಿತಿ ದರವನ್ನು ಭರಿಸಲಿದೆ ಎಂದು ಸಚಿವರು ಹೇಳಿದರು.
ವೈದ್ಯಕೀಯ ಕಾಲೇಜುಗಳಿಂದ ಗ್ರಾಮೀಣ ಆರೋಗ್ಯ ಕೇಂದ್ರಗಳ ನಿರ್ವಹಣೆ?
ಗ್ರಾಮೀಣ ಪ್ರದೇಶಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ವಹಣೆಯನ್ನು ವೈದ್ಯಕೀಯ ಕಾಲೇಜುಗಳಿಗೆ ವಹಿಸಿಕೊಡುವ ಸಾಧ್ಯಾಸಾಧ್ಯತೆಯನ್ನು ಸರ್ಕಾರ ಪರಿಶೀಲಿಸುತ್ತಿದೆ. ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತಾದ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಮಲಕರೆಡ್ಡಿ ತಿಳಿಸಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications