ಶೇಷಗಿರಿರಾಯರಿಗೆ ಕಾರಂತ, ಮಲ್ಲಿಕಾ ಘಂಟಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ
ಸಾಲಿಗ್ರಾಮ : ಇಲ್ಲಿನ ಡಾ। ಕೋಟ ಶಿವರಾಮ ಕಾರಂತ ಮೆಮೋರಿಯಲ್ ಫೌಂಡೇಶನ್‌ನ ಡಾ। ಕಾರಂತ ಪ್ರಶಸ್ತಿ ಸನ್ಮಾನಕ್ಕೆ ಹಿರಿಯ ವಿಮರ್ಶಕ ಪ್ರೊ। ಎಲ್. ಎಸ್. ಶೇಷಗಿರಿರಾವ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 14ರಂದು ಸಾಲಿಗ್ರಾಮದಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ಶೇಷಗಿರಿರಾವ್ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ ಮಾಡಲಿರುವುದಾಗಿ ಫೌಂಡೇಷನ್‌ನ ಪ್ರಕಟಣೆ ಹೇಳಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಭುತ್ವ ಪಡೆದಿರುವ ಶೇಷಗಿರಿರಾವ್ ಅವರು ಪ್ರಸ್ತುತ ಬಿರ್ಲಾ ಫೌಂಡೇಶನ್‌ನ ನಾಲ್ಕು ಸಂಪುಟಗಳ ಇಂಗ್ಲಿಷ್ ಮಹಾಭಾರತದ ರಚನೆಯಲ್ಲಿ ತೊಡಗಿದ್ದಾರೆ.
ಮಲ್ಲಿಕಾ ಘಂಟಿ ಅವರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ
ಧಾರವಾಡ:ಬಳ್ಳಾರಿಯ ಸಂಡೂರು ಹಳ್ಳಿ ಮಲ್ಲಿಕಾ ಘಂಟಿ ಅವರ ತನು ಕರಗದವರಲ್ಲಿ ಪುಸ್ತಕ ಈ ವರ್ಷದ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಕರ್ನಾಟಕ ವಿದ್ಯಾವರ್ಧಕ ಸಂಘ ಮಹಿಳಾ ಲೇಖಕಿಯರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದ್ದು ಪ್ರಶಸ್ತಿಯು ಐದು ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಸೂರ್ಯನಾಥ ಕಾಮತ್‌ಗೆ ಪೊಳಲಿ ಶೀನಪ್ಪ ಹೆಗ್ಗಡೆ ಸನ್ಮಾನ
ಉಡುಪಿ : ಪ್ರಸಿದ್ಧ ಸಂಶೋಧಕ ಡಾ. ಸೂರ್ಯನಾಥ ಕಾಮತ್ ಅವರಿಗೆ ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದಲ್ಲಿ ನಡೆದ ತುಳು ದಿನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಡಾ. ಸೂರ್ಯನಾಥ ಕಾಮತ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಿಂದ ತಾವು ಆಕರ್ಷಿತರಾದ ಬಗ್ಗೆ ತಮ್ಮ ನೆನಪುಗಳನ್ನು ಹಂಚಿಕೊಂಡರು. ತುಳುನಾಡಿನ ಇತಿಹಾಸಕ್ಕೆ ತಳಪಾಯ ಹಾಕಿದ ಪೊಳಲಿ ಶೀನಪ್ಪ ಹೆಗ್ಗಡೆ ಅವರ ಹೆಸರಿನಲ್ಲಿ ನೀಡುತ್ತಿರುವ ಈ ಪ್ರಶಸ್ತಿ ಪಡೆದ ಬಗ್ಗೆ ಕಾಮತರು ಸಂತೋಷ ವ್ಯಕ್ತ ಪಡಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications