ವೀರಪ್ಪನ್ ಶಿಕಾರಿ: ಬಿಎಸ್ಎಫ್ ವಾಪಸ್ಸು ಕರೆಸಿಕೊಳ್ಳಲು ಕೇಂದ್ರದ ನಿರ್ಧಾರ
ಬೆಂಗಳೂರು: ವೀರಪ್ಪನ್ ಶಿಕಾರಿ ಕಾರ್ಯಾಚರಣೆಯಲ್ಲಿ ಗಡಿ ಭದ್ರತಾ ಪಡೆಯ ಸೇವೆಯನ್ನು ಮುಂದುವರಿಸುವಂತೆ ಕೋರಿರುವ ರಾಜ್ಯ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದ್ದು, ಇದರಿಂದಾಗಿ ವೀರಪ್ಪನ್ ಶಿಕಾರಿ ಕಾರ್ಯಾಚರಣೆಯಲ್ಲಿ ಭಾರೀ ಹಿನ್ನಡೆ ಉಂಟಾದಂತಾಗಿದೆ.
ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ಜಂಟಿಯಾಗಿ ನಡೆಸುತ್ತಿರುವ ವೀರಪ್ಪನ್ ಶಿಕಾರಿ ಕಾರ್ಯಾಚರಣೆಯಲ್ಲಿ ಗಡಿ ಭದ್ರತಾ ಪಡೆಯ ಹಾಜರಿಯನ್ನು ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ಫ್ಯಾಕ್ಸ್ ಕಳುಹಿಸಲಾಗಿತ್ತು . ಆದರೆ, ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಪುರಸ್ಕರಿಸಲು ಒಪ್ಪಿಗೆ ನೀಡಿಲ್ಲ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಇತರೆ ಅತಿ ಮುಖ್ಯವಾದ ಕಾರ್ಯಾಚರಣೆಯಲ್ಲಿ ಗಡಿಭದ್ರತಾ ಪಡೆ ತೊಡಗಬೇಕಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿರುವುದಾಗಿ ಖರ್ಗೆ ಹೇಳಿದರು. ರಾಜ್ಕುಮಾರ್ ಅಪಹರಣದ ನಂತರ ವೀರಪ್ಪನ್ ಶಿಕಾರಿಯಲ್ಲಿ ಎಸ್ಟಿಎಫ್ ಸಿಬ್ಬಂದಿಯಾಂದಿಗೆ ಗಡಿ ಭದ್ರತಾ ಪಡೆ ಸೇರಿಕೊಂಡಿದುದನ್ನು ಇಲ್ಲಿ ಸ್ಮರಿಸಬಹುದು. ಪ್ರಸ್ತುತ ಗಡಿಭದ್ರತಾ ಪಡೆಯ ಸೇವೆಯನ್ನು ಕೇಂದ್ರ ಸರ್ಕಾರ ವಾಪಸ್ಸು ಪಡೆಯುವುದರೊಂದಿಗೆ, ಬಂದ ದಾರಿಗೆ ಸುಂಕವಿಲ್ಲದಂತೆ ಎರಡನೇ ಬಾರಿಯೂ ಗಡಿ ಭದ್ರತಾ ಪಡೆ ಬರಿಗೈಯಲ್ಲಿ ವಾಪಸ್ಸಾದಂತಾಗಿದೆ.
(ಪಿಟಿಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications