ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನರೇಂದ್ರ ಮೋದಿ
ಗಾಂಧಿನಗರ : ಇತ್ತೀಚಿನ ಅನಿರೀಕ್ಷಿತ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ಕೇಶುಭಾಯ್ ಪಟೇಲ್ ಅವರ ಸ್ಥಾನಕ್ಕೆ ನರೇಂದ್ರ ಮೋದಿ ಅವರನ್ನು ಬಿಜೆಪಿ ಶಾಸಕಾಂಗ ಸಭೆ ಅವಿರೋಧವಾಗಿ ಗುರುವಾರ ಆರಿಸಿದೆ.
ಮುಖ್ಯಮಂತ್ರಿ ಸ್ಥಾನವನ್ನು ತೆರವು ಮಾಡುತ್ತಿರುವ ಕೇಶುಭಾಯ್ ಪಟೇಲ್ ಅವರು, 51 ವರ್ಷದ ನರೇಂದ್ರ ಮೋದಿ ಅವರ ಹೆಸರನ್ನು ತಮ್ಮ ಸ್ಥಾನಕ್ಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೂಚಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧೆ ಒಡ್ಡಿದ್ದ ಸುರೇಶ್ ಮೆಹ್ತಾ ಎರಡನೆಯವರಾದರು. ಕುಶಭಾವ್ ಠಾಕ್ರೆ ಹಾಗೂ ಮದನ್ಲಾಲ್ ಖುರಾನ ಅವರು ಕೇಂದ್ರದ ವೀಕ್ಷಕರಾಗಿ ಸಭೆಯಲ್ಲಿ ಹಾಜರಿದ್ದರು.
ಮರು ಚುನಾವಣೆಗಳಲ್ಲಿ ಬಿಜೆಪಿ ಅನುಭವಿಸಿದ ಸೋಲಿನ ಹಿನ್ನೆಲೆಯಲ್ಲಿ ಕೇಶುಭಾಯ್ ಪಟೇಲ್ ಅವರು ರಾಜೀನಾಮೆ ನೀಡುವಂತೆ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಪಕ್ಷದೊಳಗಿನ ಆಂತರಿಕ ಒತ್ತಡ ಹೆಚ್ಚಾದುದರಿಂದ ಬುಧವಾರ ಕೇಶುಭಾಯ್ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು. ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications