ಇಬ್ಬರು ಆಫ್ಘನ್ನರಿಗಾಗಿ ಬೆಂಗಳೂರಿನಲ್ಲಿ ತೀವ್ರ ಶೋಧ
ಬೆಂಗಳೂರು : ವಿದ್ಯಾರ್ಥಿಗಳೆಂದು ಹೇಳಿಕೊಂಡು ಬೆಂಗಳೂರಿಗೆ ಬಂದು ಪೊಲೀಸ್ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳದ ಇಬ್ಬರು ಆಫ್ಘನ್ನರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳೆಂದು ಹೇಳಿಕೊಂಡು ಬಂದಿರುವ ಇವರು ಯಾವುದಾದರೂ ಕಾಲೇಜು ಸೇರಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಇವರು ಕಾಲೇಜು ಸೇರಿರುವರೇ ಇಲ್ಲ ಉದ್ಯೋಗಕ್ಕೆ ಸೇರಿರುವರೆ ಅಥವಾ ಇನ್ನಾವುದೇ ವಹಿವಾಟಿನಲ್ಲಿ ತೊಡಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿಲ್ಲ. ಆದರೆ, ಈ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಕೇಂದ್ರ ಗುಪ್ತಚಾರ ಇಲಾಖೆ ರಾಜ್ಯ ಪೊಲೀಸರಿಗೆ ಕೇಳಿದೆ ಎಂದು ಪ್ರಸಿದ್ಧ ಕನ್ನಡ ದಿನಪತ್ರಿಕೆಯಾಂದು ವರದಿ ಮಾಡಿದೆ.
ಯಾವುದೇ ವಿದೇಶೀ ಪ್ರಜೆ ದೇಶಕ್ಕೆ ಕಾಲಿಟ್ಟ 7 ದಿನಗಳ ಒಳಗೆ ಆಯಾ ಪ್ರದೇಶದ ವ್ಯಾಪ್ತಿಯ ಪೊಲೀಸರಲ್ಲಿ ತನ್ನ ಬಗ್ಗೆ ಸಂಪೂರ್ಣ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು. ಆತ ಪಾಕಿಸ್ತಾನಿ ರಾಷ್ಟ್ರೀಯನಾಗಿದ್ದಲ್ಲಿ 24 ಗಂಟೆಗಳ ಒಳಗಾಗಿ ನೋಂದಾಯಿಸಿಕೊಳ್ಳಬೇಕು.
ಆದರೆ, ನಗರ ಪೊಲೀಸರು ಹುಡುಕುತ್ತಿರುವ ವ್ಯಕ್ತಿಗಳು ತಮ್ಮ ವಿವರಗಳನ್ನು ಬೆಂಗಳೂರು ನಗರ ಪೊಲೀಸರಲ್ಲಿ ದಾಖಲಿಸಿಕೊಂಡಿಲ್ಲ. ನಗರದ ಪೊಲೀಸ್ ಕಾರ್ಯಾಲಯದ ವಿದೇಶೀ ರಾಷ್ಟ್ರೀಯ ವಿಭಾಗದಲ್ಲಿ ಕೇವಲ ಇಬ್ಬರು ಆಫ್ಘನ್ನರ ವಿವರ ಮಾತ್ರ ಇದೆ. ಆದರೆ, ಈಗ ಪೊಲೀಸರು ಹುಡುಕುತ್ತಿರುವ ವ್ಯಕ್ತಿಗಳಿಬ್ಬರ ವಿವರ ಇಲ್ಲಿಲ್ಲ.
ಆದಾಗ್ಯೂ ಈ ಇಬ್ಬರು ವ್ಯಕ್ತಿಗಳ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕೀತೆ ಎಂದು ತೀವ್ರ ಶೋಧ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳೆಂದು ಹೇಳಿಕೊಂಡು ಬಂದಿರುವ ಈ ಇಬ್ಬರು ಆಫ್ಘನ್ನರು ಯಾರು? ಎಂಬುದು ಸದ್ಯಕ್ಕೆ ಪ್ರಶ್ನೆಯಾಗಿ ಉಳಿದಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications