‘ಬಿಎಸ್ಎಫ್ ಹಿಂತೆಗೆತದಿಂದ ವೀರಪ್ಪನ್ ಶಿಕಾರಿಗೆ ಹಿನ್ನಡೆ ಇಲ್ಲ’
ಬೆಂಗಳೂರು: ಗಡಿ ಭದ್ರತಾ ಪಡೆಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ಕ್ರಮದಿಂದ ತಮಿಳುನಾಡು ಮತ್ತು ಕರ್ನಾಟಕ ಜಂಟಿಯಾಗಿ ನಡೆಸುತ್ತಿರುವ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಹಿನ್ನಡೆಯುಂಟಾಗಿಲ್ಲ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಕಾಡುಗಳ್ಳ ಹಾಗೂ ನರಹಂತಕ ವೀರಪ್ಪನ್ನನ್ನು ಬಂಧಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪಿ.ಟಿ.ಐ. ಸುದ್ದಿಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಕೃಷ್ಣ ಹೇಳಿದ್ದಾರೆ.
ಸೆ.11ರ ಅಮೆರಿಕ ಮೇಲಿನ ದಾಳಿಯಿಂದ, ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ಬಿ.ಎಸ್.ಎಫ್. ಕರೆಸಿಕೊಳ್ಳಲಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದೂ ಕೃಷ್ಣ ಸ್ಪಷ್ಟೀಕರಣ ನೀಡಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಬಿಎಸ್ಎಫ್ ಅನ್ನು ಕರೆಸಿಕೊಳ್ಳಲಾಗಿದ್ದು, ಮುಂದೆ ಕೇಂದ್ರ ಸರಕಾರ ಕಾರ್ಯಾಚರಣೆಗೆ ಬಿಎಸ್ಎಫ್ ನೆರವು ಒದಗಿಸುತ್ತದೆ ಎಂಬ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ. ರಾಜ್ ಬಿಡುಗಡೆ ಬಳಿಕ ಕಾರ್ಯಾಚರಣೆ ತೀವ್ರಗೊಂಡಿದೆ ಎಂದೂ ಕೃಷ್ಣ ಹೇಳಿದ್ದಾರೆ.
(ಪಿ.ಟಿ.ಐ)
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications