ಚನ್ನಪಟ್ಟಣ ರೈತರ ಮೇಲೆ ಗೋಲಿಬಾರ್: ನ್ಯಾಯಾಂಗ ತನಿಖೆ ನಿರ್ಧಾರ
ಬೆಂಗಳೂರು : ಪ್ರತಿಭಟನಾನಿರತ ರೈತರ ಮೇಲೆ ಚನ್ನಪಟ್ಟಣ ತಾಲೂಕು ವಿಟ್ನೇನಹಳ್ಳಿ (ಡಿ.ವಿ. ಹಳ್ಳಿ) ಗ್ರಾಮದಲ್ಲಿ ಮಂಗಳವಾರ ನಡೆದ ಗೋಲಿಬಾರ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಈ ವಿಷಯವನ್ನು ರಾಜ್ಯ ವಾರ್ತಾ ಸಚಿವ ಶಿವಣ್ಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಗೋಲಿಬಾರ್‌ನಿಂದ ಒಬ್ಬರು ಸಾವನ್ನಪ್ಪಿದ್ದು, ಹಲವಾರು ಮಂದಿ ರೈತರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೃಷ್ಣ ಅವರು ಉನ್ನತ ಅಧಿಕಾರಿಗಳು ಹಾಗೂ ಹಿರಿಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು. ಸಚಿವ ಸಂಪುಟದ ಸಭೆಯಲ್ಲೂ ಚರ್ಚಿಸಿದರು. ಸಂಪುಟ ಸಭೆಗೆ ಮೊದಲು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್, ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್, ಪೊಲೀಸ್ ಮಹಾನಿರ್ದೇಶಕ ವಿವಿ. ಭಾಸ್ಕರ್, ಗೃಹ ಕಾರ್ಯದರ್ಶಿ ಪ್ರಕಾಶ್ ಅವರೊಂದಿಗೆ ಕೃಷ್ಣ ಸುದೀರ್ಘ ಚರ್ಚೆ ನಡೆಸಿದರು.
ಎಸ್.ಐ. ಅಮಾನತು: ಚನ್ನಪಟ್ಟಣ ತಾಲೂಕಿನ ವಿಟ್ನೇನಹಳ್ಳಿಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿ ರೈತರೊಬ್ಬರ ಸಾವಿಗೆ ಕಾರಣರಾದ ಅಕ್ಕೂರು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಾಜೇಂದ್ರಕುಮಾರ್ ಅವರನ್ನು ಸರಕಾರ ಅಮಾನತ್ತಿನಲ್ಲಿಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಖರ್ಗೆ ಹೇಳಿದ್ದಾರೆ.
(ಇನ್‌ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications