ನೀರು ಬಿಡಲು ಕರ್ನಾಟಕ ತಿರಸ್ಕಾರ;ಕಾವೇರಿ ಪ್ರಾಧಿಕಾರ ಸಭೆ ವಿಫಲ
ನವದೆಹಲಿ : ಕಾವೇರಿ ನದಿಯಿಂದ ಕರ್ನಾಟಕ ತಕ್ಷಣವೇ ನೀರು ಬಿಡುಗಡೆ ಮಾಡಬೇಕೆಂಬ ತಮಿಳುನಾಡಿನ ಒತ್ತಾಯವನ್ನು ಕರ್ನಾಟಕ ತಿರಸ್ಕರಿಸಿದ್ದರಿಂದ ಬುಧವಾರ ದೆಹಲಿಯಲ್ಲಿ ಜರುಗಿದ ಕಾವೇರಿ ನದಿ ಪ್ರಾಧಿಕಾರದ ಸಭೆ ವಿಫಲವಾಯಿತು.
ಪ್ರಧಾನಿ ಹಾಗೂ ಕಾವೇರಿ ನದಿ ಪ್ರಾಧಿಕಾರದ ಅಧ್ಯಕ್ಷ ವಾಜಪೇಯಿ ಅವರ ಹಾಜರಿಯಲ್ಲಿ ನಡೆದ ಸಭೆ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ವಿಫಲವಾಯಿತು. ಯಾವುದೇ ಫಲಶ್ರುತಿಯಿಲ್ಲದೆ ಸಭೆ ಮುಕ್ತಾಯವಾದ ಬಗ್ಗೆ ತಮಿಳುನಾಡಿನ ಮುಖ್ಯಮಂತ್ರಿ ಓ.ಪನ್ನೀರ್ಸೆಲ್ವಂ ತೀವ್ರ ನಿರಾಶೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿನ ಬೆಳೆಗಳ ರಕ್ಷಣೆಗಾಗಿ ಕಾವೇರಿ ನೀರು ಬಿಡುಗಡೆ ಮಾಡಲು ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಒಪ್ಪಲಿಲ್ಲ . ಈ ನಿಟ್ಟಿನಲ್ಲಿ ಪ್ರಧಾನಿ ವಾಜಪೇಯಿ ಅವರು ಕೂಡ ಕರ್ನಾಟಕಕ್ಕೆ ಯಾವುದೇ ನಿರ್ದಿಷ್ಟ ನಿರ್ದೇಶನಗಳನ್ನು ನೀಡಲಿಲ್ಲ . ಯಾವುದೇ ಅಧಿಕಾರ ಇಲ್ಲದ ಪ್ರಾಧಿಕಾರದ ಬಗೆಗೆ ತಮಿಳುನಾಡಿಗೆ ನಿರಾಶೆಯಾಗಿದೆ ಎಂದು ಪನ್ನೀರ್ಸೆಲ್ವಂ ಹೇಳಿದರು.
ಬೆಳೆಗಳನ್ನು ರಕ್ಷಿಸಲು ಪ್ರತಿದಿನ ಕನಿಷ್ಠ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿದ ಮನವಿಯ ಮೇರೆಗೆ ಬುಧವಾರದ ಸಭೆ ಏರ್ಪಾಡಾಗಿತ್ತು . ಆದರೆ, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗಿರುವುದರಿಂದ ಸದ್ಯಕ್ಕೆ ಆತಂಕ ಪಡುವ ಪ್ರಮೇಯವೇನೂ ಇಲ್ಲವೆಂದು ಕರ್ನಾಟಕ ಪ್ರತಿಪಾದಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಪಿಟಿಐ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications