6 ತಿಂಗಳಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿ ಆರಂಭ : ಕೃಷ್ಣ
ಬೆಂಗಳೂರು: ದೇವನಹಳ್ಳಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿ ಮುಂದಿನ ಆರು ತಿಂಗಳಲ್ಲಿ ಆರಂಭಗೊಂಡು, ಮೂರು ವರ್ಷದ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಕೃಷ್ಣ ಪ್ರಕಟಿಸಿದ್ದಾರೆ.
ತಮ್ಮ ಸರಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ವಿಮಾನ ನಿಲ್ದಾಣ ಉದ್ಘಾಟನೆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಆಡಳಿತದಲ್ಲಿರುತ್ತದೆ ಎಂದು ನುಡಿದರು.
ತಮ್ಮ ಸರಕಾರದ ಎರಡು ವರ್ಷಗಳ ಸಾಧನೆಯನ್ನು ವಿವರಿಸಿದ ಅವರು, ಕರ್ನಾಟಕದ ಅಭಿವೃದ್ಧಿಗೆ ಹೊಸ ಹತ್ತು ಯೋಜನೆಗಳನ್ನೂ ಪ್ರಕಟಿಸಿದರು.
ಅತ್ಯಾಧುನಿಕ ಶಸ್ತ್ರಾಸ್ತ್ರ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯದ ಪೊಲೀಸರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಒದಗಿಸುವುದಾಗಿಯೂ ಎಸ್.ಎಂ. ಕೃಷ್ಣ ಪ್ರಕಟಿಸಿದರು. ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಕೇಂದ್ರ ಸರಕಾರ ಬೆಂಬಲ ನೀಡುತ್ತಿದೆ ಎಂದೂ ತಿಳಿಸಿದರು.
ನೀರಾ ಇಳಿಸುವುದರಿಂದ ತೆಂಗಿನ ಮರಕ್ಕೆ ಬಂದಿರುವ ನುಸಿ ರೋಗ ನಿವಾರಣೆ ಆಗುತ್ತದೆ ಎಂದು ಸಾಬೀತು ಪಡಿಸಿದರೆ, ನೀರಾ ಇಳಿಸಲು ಅವಕಾಶ ನೀಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ತಮ್ಮ ಸರಕಾರ ಕೇವಲ ಐ.ಟಿ, ಬಿ.ಟಿ ಜಪ ಮಾಡುತ್ತಾ, ಗ್ರಾಮೀಣ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮೀಣ ಅಭಿವೃದ್ಧಿಗೆ, ರಸ್ತೆ ಅಭಿವೃದ್ಧಿಗೆ ಮಾಡಲಾಗಿರುವ ವೆಚ್ಚದ ವಿವರ ನೀಡಿದರು. ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸುವುದಿಲ್ಲ ಎಂದೂ ಕೃಷ್ಣ ಸ್ಪಷ್ಟಪಡಿಸಿದರು. ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಕೃಷ್ಣ ನೀಡಿದ ಉತ್ತರ...
- ಚನ್ನಪಟ್ಟಣ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವುದಿಲ್ಲ.
- ಭ್ರಷ್ಟಾಚಾರ ಮತ್ತು ಅಪರಾಧ ಪ್ರಕರಣಗಳ ಅರ್ಹತೆಯನ್ನು ಆಧರಿಸಿ ಅಗತ್ಯ ಎನಿಸಿದರೆ, ಸಿ.ಬಿ.ಐ. ತನಿಖೆಗೆ ಅವಕಾಶ.
- ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಬದಲಾವಣೆ ಇಲ್ಲ.
- ನಿರುದ್ಯೋಗ, ಬಡತನ ನಿವಾರಣೆಗೆ ಕ್ರಮ. ಆಶ್ರಯ ಮನೆ ಹಂಚಿಕೆ ಮೊದಲಾದ ಕಾರ್ಯಕ್ರಮಗಳ ಅನುಷ್ಠಾನ.
- ರಸ್ತೆ ಮತ್ತು ಮೂಲಭೂತ ಸೌಲಭ್ಯ ಒದಗಿಸಲು ಒತ್ತು.
(ಇನ್‌ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications