ಕಾವೇರಿ: ಸುಪ್ರೀಂ ಕೋರ್ಟ್ ಮೊರೆ ಹೋದ ತಮಿಳುನಾಡು
ನವದೆಹಲಿ : ಕಾವೇರಿ ನದಿ ಪ್ರಾಧಿಕಾರದ ಸಭೆ ವಿಫಲವಾದ ಬಳಿಕ, ಒಣಗುತ್ತಿರುವ ಕುರುವೈ ಬೆಳೆಗೆ ನಿತ್ಯ 1 ಟಿ.ಎಂ.ಸಿ. ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಈ ಸಂಬಂಧ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯಲ್ಲಿ ಕರ್ನಾಟಕ ಸರಕಾರವು ಬೇಸಿಗೆಯ ಬೆಳಗೆ ಈಗಿನಿಂದಲೇ ನೀರು ಸಂಗ್ರಹಿಸುತ್ತಿದ್ದು, ತಮಿಳುನಾಡಿನಲ್ಲಿ ಬೆಳೆದು ನಿಂತು ನೀರಿಲ್ಲದೆ ಒಣಗುತ್ತಿರುವ ಕುರುವೈ ಬೆಳೆಗೆ ನೀರು ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿದೆ.
ತಮಿಳುನಾಡಿನ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಮೂರ್ತಿಗಳಾದ ಎಸ್.ಪಿ. ಭರೂಚಾ ಮತ್ತು ನ್ಯಾ. ವೈ.ಕೆ. ಸಬರ್ವಾಲ್ ಅವರನ್ನು ಒಳಗೊಂಡ ನ್ಯಾಯಪೀಠವು ಅಕ್ಟೋಬರ್ 29ರಂದು ಅರ್ಜಿಯ ವಿಚಾರಣೆಯನ್ನು ಸೂಕ್ತ ನ್ಯಾಯಪೀಠ ಕೈಗೆತ್ತಿಕೊಳ್ಳುವುದು ಎಂದು ತಿಳಿಸಿದೆ.
ಕರ್ನಾಟಕವು ಕಳೆದ ಜೂನ್, ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಮೆಟ್ಟೂರು ಜಲಾಶಯಕ್ಕೆ ನೀರು ಬಿಟ್ಟಿಲ್ಲ. ಹೀಗಾಗಿ ತಮಿಳುನಾಡಿನ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ತನ್ನ ಅರ್ಜಿಯಲ್ಲಿ ತಿಳಿಸಿದೆ. ಕಾವೇರಿ ನದಿ ನೀರು ಹೆಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ಮಧ್ಯಂತರ ತೀರ್ಪನ್ನು ಕರ್ನಾಟಕ ಉಲ್ಲಂಘಿಸಿದೆ ಎಂದೂ ಅದು ಅಪಾದಿಸಿದೆ.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications