ಕೋಫಿ ಅನ್ನಾನ್ ಹಾಗೂ ವಿಶ್ವ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
ಓಸ್ಲೋ: ನಾರ್ವೆಯನ್ ನೊಬೆಲ್ ಪ್ರಶಸ್ತಿ ಆಯ್ಕೆ ಸಮಿತಿಯು ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಜಾಗತಿಕ ಶಾಂತಿಗಾಗಿ ಯತ್ನಿಸುತ್ತಿರುವ ವಿಶ್ವಸಂಸ್ಥೆ ಹಾಗೂ ವಿಶ್ವ ಸಂಸ್ಥೆಯ ಮಹಾನ್ ಕಾರ್ಯದರ್ಶಿ ಕೋಫಿ ಅನ್ನಾನ್ಗೆ ನೀಡಲು ನಿರ್ಧರಿಸಿದೆ.
ನಾರ್ವೇಯನ್ ನೊಬೆಲ್ ಸಂಸ್ಥೆ ಶುಕ್ರವಾರ ಈ ವಿಷಯವನ್ನು ಪ್ರಕಟಿಸಿದೆ. ಕೋಫಿ ಅನ್ನಾನ್ ತಮ್ಮ ವೃತ್ತಿ ಬದುಕಿನ ಸಮಯವನ್ನು ವಿಶ್ವಸಂಸ್ಥೆಗಾಗಿ ಮುಡಿಪಾಗಿರಿಸಿದವರು. ಮಾನವ ಹಕ್ಕುಗಳ ಬಗೆಗಿನ ಕಾಳಜಿಗೂ ಹೆಚ್ಚಿನ ಒತ್ತುಕೊಟ್ಟು, ಜಾಗತಿಕ ಭದ್ರತೆ ಮತ್ತು ಶಾಂತಿ ಭದ್ರತೆ ಕಾಪಾಡುವ ವಿಶ್ವ ಸಂಸ್ಥೆಯ ಉದ್ದೇಶವನ್ನು ಅರ್ಥೈಸಿಕೊಂಡು ಮುನ್ನಡೆದವರು. ಎಚ್ಐವಿ, ಏಯ್ಡ್ಸ್, ಅಂತರರಾಷ್ಟ್ರೀಯ ಭಯೋತ್ಪಾದನೆ ವಿಷಯನ್ನು ನಿರ್ವಹಿಸುವಲ್ಲಿ ಅನ್ನಾನ್ ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ನೊಬೆಲ್ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಹೇಳಿದೆ.
ವಿಶ್ವಸಂಸ್ಥೆಯು ಸಾಕಷ್ಟು ಸಾಧನೆಗಳ ಇತಿಹಾಸವನ್ನು ಪಡೆದಿದೆ. ಏಳು ಬೀಳುಗಳನ್ನೂ ಕಂಡಿದೆ. ವಿಶ್ವಸಂಸ್ಥೆಗೆ ಶಾಂತಿ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲ ಸಲ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications