ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ತೇರು ಉಡುಪಿ ರಾಜಾಂಗಣಕ್ಕೆ?
ಸಾಲಿಗ್ರಾಮ : ತುಮಕೂರಿನಲ್ಲಿ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈವರೆಗೂ ಗುಣಾತ್ಮಕ ಪ್ರತಿಕ್ರಿಯೆ ಬರದೇ ಇರುವುದರಿಂದ ಕಾರ್ಯಕಾರಿ ಸಮಿತಿಯ ಒಪ್ಪಿಗೆ ದೊರೆತಲ್ಲಿ ಸಮ್ಮೇಳನವನ್ನು ಉಡುಪಿಯ ರಾಜಾಂಗಣದಲ್ಲಿ ನಡೆಸಲಾಗುವುದು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ತಿಳಿಸಿದ್ದಾರೆ.
ಗುರುವಾರ ವಾಣಿ ವಿಲಾಸಿನಿ ಸಂಸ್ಕೃತ ಶಾಲೆಯಲ್ಲಿ ಡಾ. ಶಿವರಾಮ ಕಾರಂತರ ಜನ್ಮಶತಾಬ್ಧಿ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಉಡುಪಿ ಕೃಷ್ಣ ದೇವಸ್ಥಾನದ ರಾಜಾಂಗಣದಲ್ಲಿ ಬರುವ ಡಿಸೆಂಬರ್ನಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಪರ್ಯಾಯ ಪೀಠದ ಪೇಜಾವರ ಶ್ರೀಗಳು ಈಗಾಗಲೇ ಸಮ್ಮತಿಸಿದ್ದಾರೆ. ಆದರೆ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ನಿರ್ಣಯವಾಗಬೇಕಾಗಿದೆ ಎಂದು ಪುನರೂರು ಹೇಳಿದರು.
ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತುಮಕೂರಿನಲ್ಲಿ ನಡೆಸಲು ಪ್ರೊ. ಎನ್. ಬಸವಾರಾಧ್ಯ ಅವರು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾಗಿದ್ದಾಗ ನಿರ್ಧರಿಸಲಾಗಿತ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ಆಸಕ್ತಿ ತೋರಿಸುತ್ತಿಲ್ಲ ಎಂಬ ಕಾರಣಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿತ್ತು. ಸಾಹಿತ್ಯ ಪರಿಷತ್ನ ನೂತನ ಅಧ್ಯಕ್ಷರಾಗಿ ಹರಿಕೃಷ್ಣ ಪುನರೂರು ಅವರು ಆಯ್ಕೆಯಾದ ನಂತರ ಸಮ್ಮೇಳನವನ್ನು ಮತ್ತೆ ತುಮಕೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications