ಇದು ಹಸಿಬರ !ಅತಿವೃಷ್ಟಿಯಲ್ಲಿ ಕೊಚ್ಚಿ ಹೋದ ಕೊಪ್ಪಳ ರೈತ !
ಕೊಪ್ಪಳ : ಕೈಕೊಟ್ಟ ಮುಂಗಾರಿನಿಂದ ಕಂಗಾಲಾಗಿದ್ದ ರೈತರ ಪಾಲಿಗೆ ತಡವಾಗಿ ಬಂದ ಜೋರು ಮಳೆಯೂ ದುಸ್ವಪ್ನವಾಗಿದೆ. ಹತ್ತಿ, ಮೆಕ್ಕೆಜೋಳ, ಈರುಳ್ಳಿ, ಮೆಣಸಿನಕಾಯಿ ಮತ್ತಿತರ ಬೆಳೆ ಬೆಳೆದ ರೈತರು ತಲೆ ಮೇಲೆ ಕೈಹೊತ್ತಿದ್ದಾರೆ.
ಕೊಪ್ಪಳ ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಈರುಳ್ಳಿ ಬೆಳೆ ನಾಶವಾಗಿದ್ದು, ಪ್ರತಿ ರೈತ ಕನಿಷ್ಠ ತಲಾ 30 ಸಾವಿರ ರುಪಾಯಿ ಕಳಕೊಂಡಿದ್ದಾನೆ. ಭಾರೀ ನಿರೀಕ್ಷೆಯಲ್ಲಿ ಬೆಳೆದ ಕೆಲವರಂತೂ ಎರಡು ಮೂರು ಲಕ್ಷ ರುಪಾಯಿ ನಷ್ಟ ಅನುಭವಿಸಿದ್ದಾರೆ. ಮಳೆ ಜಾಸ್ತಿಯಾದರೆ ಈರುಳ್ಳಿ ಗೆಡ್ಡೆಗಳು ಕೊಳೆತು ಹೋಗುವುದರಿಂದ ಹೀಗಾಗಿದೆ.
ಹತ್ತಿ ಬೆಳೆದ ರೈತರಿಗೂ ಲಕ್ಷಾಂತರ ರುಪಾಯಿ ನಷ್ಟ ಆಗಿದೆ. ಕಾಯಿಗಟ್ಟಿದ್ದ ಹತ್ತಿ ಗಾಳಿ-ಮಳೆಯಿಂದ ನೆಲ ಕಚ್ಚಿದೆ. ಮೆಕ್ಕೆಜೋಳ, ಮೆಣಸಿನಕಾಯಿ ಬೆಳೆಗಳೂ ಕಟಾವಿಗೆ ಬಂದಿದ್ದವು. ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಅವುಗಳಲ್ಲಿ ಮೊಳಕೆ ಮೂಡಿಸಿರುವುದರಿಂದ ಈ ಬೆಳೆಗಳೂ ಹಾಳಾಗಿವೆ. ಅನಾವೃಷ್ಟಿ ಬರ ತಂದರೆ, ಅತಿವೃಷ್ಟಿ ರೈತರ ಜೀವನಕ್ಕೆ ಗರ ಬಡಿಸಿದೆ.
ಸಾವು : ರಾಯಚೂರಲ್ಲಿ ಶುಕ್ರವಾರ ಸಿಡಿಲು ಬಡಿದ ಕಾರಣ ಮಹಾದೇವಿ (25) ಎಂಬಾಕೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ಹೇಳಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications