ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟಂಬರ್‌ನಲ್ಲಿ ಮೆಟ್ಟೂರು ಜಲಾಶಯಕ್ಕೆ ರಾಜ್ಯದಿಂದ 15 ಟಿಎಂಸಿ ನೀರು

By Staff
|
Google Oneindia Kannada News

ಬೆಂಗಳೂರು : ಸೆಪ್ಟಂಬರ್‌ನಲ್ಲಿ ರಾಜ್ಯದಿಂದ ತಮಿಳುನಾಡಿಗೆ 15 ಟಿಎಂಸಿಗೂ ಹೆಚ್ಚು ನೀರು ಹರಿದಿದ್ದು, ಪ್ರಸ್ತುತ ರಾಜ್ಯದಿಂದ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ 1 ಟಿಎಂಸಿಗೂ ಹೆಚ್ಚು ನೀರು ಹರಿಯು-ತ್ತಿದೆ ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ಎಚ್‌.ಕೆ.ಪಾಟೀಲ್‌ ಸೋಮವಾರ ತಿಳಿಸಿದರು.

ಮಾನ್ಸೂನ್‌ ವಿಫಲತೆಯಿಂದ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿದೆ. ಆದರೆ, ಕರ್ನಾಟಕದಂತೆ ತಮಿಳುನಾಡಿನಲ್ಲಿ ನೀರಿಗೆ ಸಂಕಷ್ಟ ಪರಿಸ್ಥಿತಿಯೇನೂ ಇಲ್ಲ . ಅಲ್ಲಿ ಮಾನ್ಸೂನ್‌ ಚುರುಕಾಗಿದೆ ಎಂದು ಸೋಮವಾರ ಪ್ರೆಸ್‌ಕ್ಲಬ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಎಚ್‌.ಕೆ.ಪಾಟೀಲ್‌ ಹೇಳಿದರು.

ಇತ್ತೀಚಿನ ಕಾವೇರಿ ಪ್ರಾಧಿಕಾರದ ಸಭೆಯಲ್ಲಿ , ರಾಜ್ಯದಲ್ಲಿನ ಮಳೆಯ ವೈಫಲ್ಯ ಹಾಗೂ ಜಲಾಶಯಗಳಲ್ಲಿನ ನೀರಿನ ಕೊರತೆ ಪರಿಸ್ಥಿತಿಯ ಬಗ್ಗೆ ಪ್ರಧಾನಿ ವಾಜಪೇಯಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ರಾಜ್ಯದ ರೈತರ ಹಿತಾಸಕ್ತಿ ರಕ್ಷಿಸಲು ಸರ್ಕಾರ ಬದ್ಧವಾಗಿರುವುದಾಗಿ ಸಚಿವರು ಭರವಸೆ ನೀಡಿದರು.

(ಪಿಟಿಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X