ಕೇಂದ್ರ ಸಚಿವ ಸಂಪುಟಕ್ಕೆ ಜಾರ್ಜ್ ಫರ್ನಾಂಡಿಸ್‌ಮರು ಸೇರ್ಪಡೆ
ನವದೆಹಲಿ: ಪ್ರಧಾನಿ ವಾಜಪೇಯಿ ಅವರು ಸೋಮವಾರ ತಮ್ಮ ಸಂಪುಟವನ್ನು ವಿಸ್ತರಿಸಿದ್ದು, ಜಾರ್ಜ್ ಫರ್ನಾಂಡಿಸ್ ಸಂಪುಟಕ್ಕೆ ಮರು ಸೇರ್ಪಡೆ ಆಗಿದ್ದಾರೆ. ರಾಷ್ಟ್ರಪತಿ ಭವನದ ಅಶೋಕ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾರ್ಜ್ ಫರ್ನಾಂಡಿಸ್ ಸತ್ಯ ಹಾಗೂ ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಪ್ರಮಾಣ ವಚನ ಭೋದಿಸಿದರು. ಇವರೊಂದಿಗೆ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸಂಪುಟದಿಂದ ನಿರ್ಗಮಿಸಿದ್ದ ಗುಜರಾತ್‌ನ ಭಾರತೀಯ ಜನತಾ ಪಕ್ಷದ ಸಂಸದ ಹರೀನ್ ಪಾಠಕ್ ಸಹ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿರೋಧ: ತೆಹಲ್ಕಾ ಹಗರಣದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಫರ್ನಾಂಡಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾ. ವೆಂಕಟಸ್ವಾಮಿ ಆಯೋಗ ವಿಚಾರಣೆ ನಡೆಸುತ್ತಿರುವಾಗ ಜಾರ್ಜ್‌ರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವುದು ಸೂಕ್ತವಲ್ಲ ಎಂದು ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು.
ಜಾರ್ಜ್ ಅವರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದರು, ಅವರ ವಿರುದ್ಧ ಯಾವುದೇ ಕೇಸು ದಾಖಲಾಗಿಲ್ಲ ಎಂದು ಸಮರ್ಥಿಸಿಕೊಂಡಿರುವ ಪ್ರಧಾನಿ ವಾಜಪೇಯಿ ಅವರು ಪ್ರತಿಪಕ್ಷಗಳ ವಿರೋಧದ ನಡುವೆಯೂ ಫರ್ನಾಂಡಿಸ್ ಅವರನ್ನು ಸಂಪುಟ ದರ್ಜೆ ಸಚಿವರಾಗಿ ತಮ್ಮ ಸಂಪುಟಕ್ಕೆ ಸೇರಿಸಿಕೊಂಡು ರಕ್ಷಣಾ ಖಾತೆಯನ್ನೇ ನೀಡಿದ್ದಾರೆ.
ಜಾರ್ಜ್ ರಾಜೀನಾಮೆ ನೀಡಿದ ತರುವಾಯ ಆ ಖಾತೆಯನ್ನು ಯಾರಿಗೂ ಸ್ವತಂತ್ರವಾಗಿ ವಹಿಸಿಕೊಟ್ಟಿರಲಿಲ್ಲ. ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್ ಅವರೇ ಹೆಚ್ಚುವರಿಯಾಗಿ ಆ ಖಾತೆಯ ಹೊಣೆಯನ್ನೂ ಹೊತ್ತಿದ್ದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಕೃಷ್ಣಕಾಂತ್, ಅಟಲ್ ಬಿಹಾರಿ ವಾಜಪೇಯಿ, ಜಿ.ಎಂ.ಸಿ. ಬಾಲಯೋಗಿ, ಎಲ್.ಕೆ. ಆಡ್ವಾಣಿ, ಸುಷ್ಮಾ ಸ್ವರಾಜ್ ಮೊದಲಾದವರು ಭಾಗವಹಿಸಿದ್ದರು.
(ಪಿ.ಟಿ.ಐ/ಇನ್‌ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications