• search

ಕಿತ್ತೂರು ರಾಣಿ ಹುಟ್ಟೂರು ಕಟಕಿಯಲ್ಲಿ ಚೆನ್ನಮ್ಮ ಪ್ರತಿಮೆಗೆ ಆಗ್ರಹ

By Staff
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಳಗಾವಿ : ಕಟಕಿ ಗ್ರಾಮದಲ್ಲಿ ಕಿತ್ತೂರು ಚೆನ್ನಮ್ಮ ರಾಣಿಯ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲೆಯ ಕನ್ನಡ ಸಂಘಟನೆಗಳು ಅಕ್ಟೋಬರ್‌ 22ರಂದು ಉಪವಾಸ ಸತ್ಯಾಗ್ರಹ ನಡೆಸಲಿವೆ.

    ಕಿತ್ತೂರು ರಾಣಿಯ ಹುಟ್ಟೂರಾದ ಕಟಕಿ ಗ್ರಾಮದಲ್ಲಿ ರಾಣಿಯ ಪ್ರತಿಮೆಯನ್ನು ಸ್ಥಾಪಿಸಬೇಕು ಹಾಗೂ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಚೆನ್ನಮ್ಮ ರಾಣಿಯ ತವರನ್ನು ರಾಜ್ಯದ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಬೇಕು ಎಂದು ಕನ್ನಡ ಸಂಘಟನೆಗಳು ಕಳೆದೆರಡು ವರ್ಷಗಳಿಂದ ಸರಕಾರವನ್ನು ಆಗ್ರಹಿಸುತ್ತಿವೆ.

    ಜೈ ಕರ್ನಾಟಕ ಯುವಕ ಮಂಡಲ ಮತ್ತು ರಾಷ್ಟ್ರೀಯ ಏಕತಾ ಕ್ರಾಂತಿಕಾರಿ ಮಂಡಲದ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಲಿದ್ದು, ಈ ಬಗ್ಗೆ ಜಿಲ್ಲಾ ಉಪ ಆಯುಕ್ತ ಡಿ.ಬಿ. ಇನಾಮ್‌ದಾರ್‌ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ.

    (ಇನ್ಫೋ ವಾರ್ತೆ)

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more