ಅಡಿಕೆಗೆ ಬೆಂಬಲ ಬೆಲೆ : ರಾಜ್ಯದ ಸಹಕಾರಕ್ಕೆ ಪೂರಕವಾಗಿ ಕೇಂದ್ರದ ನೆರವು
ಮಂಗಳೂರು : ದರ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗೆ ರಾಜ್ಯ ಸರಕಾರ ಬೆಂಬಲ ಬೆಲೆ ಘೋಷಿಸಿದಲ್ಲಿ, ಕೇಂದ್ರ ಸರಕಾರವೂ ಸಂಪೂರ್ಣ ಬೆಂಬಲ ನೀಡಲು ಸಿದ್ಧವಾಗಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಅನಂತಕುಮಾರ್ ಭರವಸೆ ನೀಡಿದ್ದಾರೆ.
ಅವರು ಸೋಮವಾರ ಕ್ಯಾಂಪ್ಕೋ ಕಂಪೆನಿಗೆ ಭೇಟಿ ನೀಡಿ, ಅಲ್ಲಿನ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹರಿಸಲು ರಾಜ್ಯ ಸರಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಪೂರಕವಾಗಿ ಕೇಂದ್ರವೂ ಸಹಾಯ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಕೂಡ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ ಎಂದು ಅನಂತ್ ಕುಮಾರ್ ಹೇಳಿದರು.
ಅಡಿಕೆ ಮಾರುಕಟ್ಟೆಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು, ನಿರ್ದಿಷ್ಟ ಯೋಜನೆಗಳನ್ನು ತಯಾರಿಸುವ ನಿಟ್ಟಿನಲ್ಲಿ ಕರಾವಳಿಯ ಎರಡೂ ಜಿಲ್ಲೆಗಳ ಶಾಸಕರು ಮತ್ತು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರು ದೆಹಲಿಯಲ್ಲಿ ಒಂದು ಸಭೆ ನಡೆಸುವಂತೆ ಸಲಹೆ ಮಾಡಿದ ಅನಂತ ಕುಮಾರ್ ಪರಂಪರಾಗತವಾಗಿ ನಮ್ಮ ದೇಶದಲ್ಲಿ ಬಳಕೆಯಲ್ಲಿರುವ ಅಡಿಕೆಯನ್ನು ಕಾಪಾಡಿದಲ್ಲಿ ಒಂದು ಸಂಸ್ಕೃತಿಯನ್ನು ಉಳಿಸಿದಂತಾಗುತ್ತದೆ ಎಂದರು.
ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ , ವಿಧಾನ ಪರಿಷತ್ ಸದಸ್ಯ ಡಾ. ವಿ.ಎಸ್. ಆಚಾರ್ಯ, ಬಾಲಕೃಷ್ಣ ಭಟ್ ಮತ್ತು ಶಾಸಕ ರುಕ್ಮಯ ಪೂಜಾರಿ ಈ ಸಂದರ್ಭದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications