ಇಂಟೆಲ್ನ ಪ್ರಮುಖ ಅಂಗಡಿಯಾಂದು ಅಮೆರಿಕಾದಿಂದ ಬೆಂಗಳೂರಿಗೆ?
ಬೆಂಗಳೂರು: ಅಮೆರಿಕಾದ ಸಾಫ್ಟ್ವೇರ್ ದೈತ್ಯ ಎಂದೇ ಪ್ರಸಿದ್ಧವಾದ ಇಂಟೆಲ್, ತನ್ನ ಪ್ರಮುಖ ಸಂಶೋಧನಾ ಹಾಗೂ ಅಭಿವೃದ್ಧಿ ಚಟುವಟಿಕೆಗಳ ಕೇಂದ್ರ(research and development operations)ವೊಂದನ್ನು ಅಮೆರಿಕದಿಂದ ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟಂಬರ್ 11 ರಂದು ಅಮೆರಿಕ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಇಂಟೆಲ್ ಈ ನಿರ್ಣಯಕ್ಕೆ ಬಂದಿದೆ ಎನ್ನಲಾಗಿದೆ.
ಇಂಟೆಲ್ನ ಬೆಂಗಳೂರು ಪ್ರವೇಶಕ್ಕೆ ಬೆಂಗಳೂರು ಐಟಿ.ಕಾಂ-2001 ಮೇಳ ವೇದಿಕೆಯಾದರೂ ಆಶ್ಚರ್ಯವಿಲ್ಲ . ತಮ್ಮ ಕಾರ್ಯಯೋಜನೆಯ ಬಗ್ಗೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಬಿ.ಕೆ. ಚಂದ್ರಶೇಖರ್ ಅವರೊಂದಿಗೆ ಚರ್ಚಿಸಲು ಇಂಟೆಲ್ ಅಧಿಕಾರಿಗಳು ನವಂಬರ್ ಮೊದಲ ವಾರದಲ್ಲಿ ಬೆಂಗಳೂರಿಗೆ ಆಗಮಿಸುವರು ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಅಮೆರಿಕಾದ ವಾಷಿಂಗ್ಟನ್, ಕ್ಯಾಲಿಫೋರ್ನಿಯಾ, ಇಲಿನಾಯ್ಸ್, ಒರೆಗಾನ್ ಹಾಗೂ ಅರಿಜೋನಾ ಸೇರಿದಂತೆ ಪ್ರಸ್ತುತ ವಿಶ್ವದ 80 ಪ್ರದೇಶಗಳಲ್ಲಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಇಂಟೆಲ್ ಹೊಂದಿದೆ. ಇಸ್ರೇಲ್, ಸ್ವೀಡನ್, ಟೋಕಿಯಾ ಹಾಗೂ ಚೀನಾಗಳಲ್ಲೂ ಇಂಟೆಲ್ ಪ್ರಯೋಗಾಲಯಗಳನ್ನು ಹೊಂದಿದೆ.
ಬೆಂಗಳೂರಿಗೆ ಇಂಟೆಲ್ ಪ್ರವೇಶ ಹೊಸತೇನೂ ಅಲ್ಲ . ಸಾಫ್ಟ್ವೇರ್ ಅಭಿವೃದ್ಧಿ ಸೌಲಭ್ಯ ಮಾತ್ರವಲ್ಲದೆ, ಇತ್ತೀಚೆಗಷ್ಟೇ ಭಾರತೀಯ ವಿಜ್ಞಾನ ಕೇಂದ್ರದಲ್ಲಿ ಪ್ರಯೋಗಾಲಯವೊಂದನ್ನು ಇಂಟೆಲ್ ಪ್ರಾರಂಭಿಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications